ಮೈಸೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಹಿಳಾ ಸದಸ್ಯರಾಗಿ ಎಸ್.ಲಕ್ಷ್ಮಿದೇವಿ ನೇಮಕ

ಮೈಸೂರು,ಸೆ.9:- ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ಕಲಂ 3(3*m) ರನ್ವಯ ಹಾಗೂ ಕಲಂ-3(4)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಎಸ್.ಲಕ್ಷ್ಮಿದೇವಿ ಮೈಸೂರು ಇವರನ್ನು ಈ ಕೂಡಲೇ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಹಿಳಾ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಸಿ.ಎಸ್.ಶಿವಕುಮಾರಸ್ವಾಮಿ ತಿಳಿಸಿದ್ದಾರೆ. ಇದೇ ವೇಳೆ ಇಂದು ನಗರಾಭಿವೃದ್ಧಿ ಪ್ರಾಧಿಕಾರದ ಕಛೇರಿಯಲ್ಲಿ ಆಯುಕ್ತರಾದ ಡಾ.ಬಿ.ನಟೇಶ್ ಹೂ ಗುಚ್ಛ ನೀಡುವ ಮೂಲಕ ಅಭಿನಂದಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: