ಪ್ರಮುಖ ಸುದ್ದಿಮೈಸೂರು

ಮನೆ ಮನೆಗೆ ತೆರಳಿ ಮತಯಾಚಿಸಿದ ಬಿ.ಎಸ್.ಯಡಿಯೂರಪ್ಪ

ನಂಜನಗೂಡು ಪಟ್ಟಣದ ನೀಲಕಂಠ ನಗರ ಮತ್ತು ಚಾಮಲಾಪುರದಹುಂಡಿ ಮುಂತಾದ ಬಡಾವಣೆಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಅವರು ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.
ಬಿಜೆಪಿ ಕಾರ್ಯಕರ್ತರ ಜೈಕಾರದ ನಡುವೆ ಮನೆಗಳು, ಅಂಗಡಿಗಳಿಗೆ ತೆರಳಿದ ಅವರು ಜನರನ್ನು ಸಂಪರ್ಕಿಸಿ ಕರಪತ್ರಗಳನ್ನು ನೀಡುವ ಮೂಲಕ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ವಿ.ಶ್ರೀನಿವಾಸ ಪ್ರಸಾದ್ ಅವರಿಗೆ ಮತ ಚಲಾಯಿಸುವ ಮೂಲಕ ಬಿಜೆಪಿಗೆ ಬಲ ತುಂಬಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ವಿ.ಫಣೀಶ್, ಕಾರ್ಯದರ್ಶಿ ಬಿ.ಪಿ.ಬೋರೇಗೌಡ, ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ನಂದೀಶ್‍ಪ್ರೀತಂ ಮತ್ತಿತರರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: