ಮೈಸೂರು

ಸಹಕಾರಿ ಕಾರ್ಯಚಟುವಟಿಕೆಗಳ ಮೌಲ್ಯಮಾಪನ ವರದಿ ಸಲ್ಲಿಕೆ

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಕೋರಿಕೆಯ ಮೇರೆಗೆ ರಾಜ್ಯದ ಸೌಹಾರ್ದ ಸಹಕಾರಿಗಳ ಬಗ್ಗೆ ಮೈಸೂರು ವಿಶ್ವವಿದ್ಯಾನಿಲಯದ ತೃತೀಯ ಕ್ಷೇತ್ರ ಸಂಶೋಧನಾ ಕೇಂದ್ರದ ಸಂಯೋಜಕ ಡಾ.ಯಶವಂತ ಡೋಂಗ್ರೆ ಅವರ ಮಾರ್ಗದರ್ಶನದಲ್ಲಿ ಅಧ್ಯಯನ ನಡೆಸಿದ ತಂಡವು ಸಹಕಾರಿಯ ಕಾರ್ಯವಿಧಾನ ಮತ್ತು ಸಾಧನೆಗಳ ಬಗ್ಗೆ ತಿಳಿಸಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಉಪಾಧ್ಯಕ್ಷ ಹೆಚ್.ವಿ.ರಾಜೀವ್ ಹೇಳಿದರು.

ಮೈಸೂರಿನ ಮಹಾತ್ಮಗಾಂಧಿ ರಸ್ತೆಯಲ್ಲಿರುವ ಹೋಟೆಲ್ ಸಿಪಾಯಿ ಗ್ರ್ಯಾಂಡ್‍ನಲ್ಲಿ ನಡೆದ ಸಮಾರಂಭದಲ್ಲಿ ಮೈಸೂರು ವಿವಿ ತೃತೀಯ ಕ್ಷೇತ್ರ ಸಂಶೋಧನಾ ಕೇಂದ್ರದ ವತಿಯಿಂದ ಡಾ.ಯಶವಂತ ಡೋಂಗ್ರೆ ಅವರ ಮಾರ್ಗದರ್ಶನದಲ್ಲಿ ರೂಪಿಸಲಾದ ವರದಿಯನ್ನು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಉಪಾಧ್ಯಕ್ಷ ಎಚ್.ವಿ.ರಾಜೀವ್ ಅವರಿಗೆ ನೀಡಲಾಯಿತು. ಮೈಸೂರು ವಿವಿಯ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ.ಎಂ.ಇಂದಿರ, ಡಾ.ಉಮಾ, ಡಾ.ಮೀರಾ ಮತ್ತು ಡಾ.ನಿಂಗಮ್ಮ ಬೆಟ್ಸೂರ್ ಅವರು ಸಂಶೋಧಕರಾಗಿ ಕಾರ್ಯನಿರ್ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಂಗಳೂರು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,ಪ್ರೊ.ಇಂದಿರ,  ಅಪರ ನಿಬಂಧಕ ಸಿ.ಎನ್.ಪರಶಿವಮೂರ್ತಿ ಪ್ರೊ.ವಿಶ್ವನಾಥ್, ಬಿ.ಎಚ್.ಕೃಷ್ಣರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.  (ಬಿ.ಎಂ-ಎಸ್.ಎಚ್)

Leave a Reply

comments

Related Articles

error: