ಮೈಸೂರು

ಕಾರ್ಮಿಕರಿಂದ ಮುಖ್ಯಮಂತ್ರಿಗಳಿಗೆ ಅಭಿನಂದನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ  ಖಾಸಗಿ ಉದ್ಯಮದ ಕಾರ್ಮಿಕರ ನಿವೃತ್ತಿ ವಯಸ್ಸನ್ನು 58 ರಿಂದ 60 ವರ್ಷಕ್ಕೆ ಏರಿಕೆ ಮಾಡಿರುವುದನ್ನು ಸ್ವಾಗತಿಸಿ  ಮೈಸೂರಿನ ವಿಕ್ರಾಂತ್ ಟೈರ್ಸ್ ಎಂಪ್ಲಾಯಿಸ್ ಯೂನಿಯನ್‍ ವತಿಯಿಂದ ಸಿದ್ಧರಾಮಯ್ಯನವರನ್ನು ಸನ್ಮಾನಿಸಲಾಯಿತು.

ಮೈಸೂರಿನ ಶಾರದಾದೇವಿ ನಗರದಲ್ಲಿರುವ ಮುಖ್ಯಮಂತ್ರಿಗಳ ಮನೆಗೆ ತೆರಳಿದ ಕಾರ್ಮಿಕರು ಮುಖ್ಯ ಮಂತ್ರಿಗಳಿಗೆ ಶಾಲು ಹೊದಿಸಿ ಅಭಿನಂದಿಸಿದರು. ಯೂನಿಯನ್‍ನ ಅಧ್ಯಕ್ಷ ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ವಿ. ಸೋಮಶೇಖರ್, ಉಪಾಧ್ಯಕ್ಷ ಕಾಂತರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: