ಮೈಸೂರು

ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸಿದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು,ಸೆ.11:- ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಗರ‌‌ ವ್ಯಾಪ್ತಿಯಲ್ಲಿ ಶಾಸಕ ಜಿ.ಟಿ.ದೇವೇಗೌಡ ಭೇಟಿ ನೀಡಿ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸಿದರು.
ಮೊದಲಿಗೆ ವಾರ್ಡ್ ನಂಬರ್ 44 ರ ಬೋಗಾದಿ 2ನೇ ಹಂತದ ಪಾರ್ಕ್ ನಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸಿದರು. ಸಾರ್ವಜನಿಕರು ಪಾರ್ಕ್ ಅಭಿವೃದ್ಧಿಪಡಿಸುವಂತೆ ಹಾಗೂ ಮುಖ್ಯರಸ್ತೆಯ ಹರ್ಷ ಬಾರ್ ಸರ್ಕಲ್ ಅನ್ನು ಅಗಲೀಕರಣ ಗೊಳಿಸುವಂತೆ ಕೋರಿದರು. ಈ ಸಂಬಂಧ ಅಂದಾಜುಪಟ್ಟಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ನಂತರ ಮುಖ್ಯರಸ್ತೆಯಲ್ಲಿರುವ ಬ್ಯಾರಿಕೇಡ್ ಅನ್ನು ಬದಲಾಯಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು, ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಕೂಡಲೇ ಪೈಪ್ಲೈನ್ ಅಳವಡಿಸಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವಂತೆ ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಕೂಡಲೇ ಪೈಪ್ ಲೈನ್ ಕಾಮಗಾರಿ ಪ್ರಾರಂಭಿಸಲಾಗುವುದು ಶಾಸಕರು ತಿಳಿಸಿದರು.

ಈ ವೇಳೆ ಸ್ಥಳೀಯರು ಹಲವು ಸಮಸ್ಯೆಗಳನ್ನು ಕುರಿತಂತೆ ತಮ್ಮ ಜೊತೆ ಅಳಲು ತೋಡಿಕೊಂಡಿದ್ದು, ಇನ್ನೂ ಎರಡು ಮೂರು ದಿನದೊಳಗೆ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಲಾಯಿತು. ನಂತರ ವಾರ್ಡ್ ನಂ. 45ರಲ್ಲಿರುವ ನಿವೇದಿತಾ ನಗರದ ಸುಬ್ಬುರಾವ್ ಪಾರ್ಕ್ ನಲ್ಲಿ ನೂತನವಾಗಿ ನಿರ್ಮಿಸಿರುವ ವಿಶ್ರಾಂತಿ ಕೇಂದ್ರವನ್ನು ಉದ್ಘಾಟಿಸಲಾಯಿತು.

ಈ ವೇಳೆ ಕ್ಷೇತ್ರದ ವಾರ್ಡ್ ನಂ45ರಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಲಾಯಿತು, ಸ್ಥಳೀಯರು ಬಸ್ ನಿಲ್ದಾಣ, ರಸ್ತೆ ಅಭಿವೃದ್ಧಿ, ಸರ್ಕಲ್‌ ಗಳ ದುರಸ್ತಿ, ಈಜು ಕೊಳ, ಒಳಚರಂಡಿ ಹಾಗೂ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆರಿಸುವುದು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಕುರಿತಂತೆ ಶಾಸಕರ ಗಮನಕ್ಕೆ ತಂದರು.
ಈ ಎಲ್ಲಾ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶೀಘ್ರವಾಗಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು, ಆದಷ್ಟು ಶೀಘ್ರವಾಗಿ ಈ ಕೆಲಸಗಳನ್ನು ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಲಾಯಿತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: