
ಮೈಸೂರು
ನಾಲ್ವಡಿ ಕೃಷ್ಣರಾಜ ಒಡೆಯರ್-ಸರ್ ಎಂ ವಿಶ್ವೇಶ್ವರಯ್ಯ ರಾಮ ಮತ್ತು ಹನುಮನಿದ್ದಂತೆ: ಶಾಸಕ ಜಿಟಿಡಿ ಬಣ್ಣನೆ
ಸರ್. ಎಂ. ವಿಶ್ವೇಶ್ವರಯ್ಯ ಅವರ ಜಯಂತಿ ಆಚರಣೆ
ಮೈಸೂರು,ಸೆ.15:- ಇಂದು ಖ್ಯಾತ ಇಂಜಿನಿಯರ್, ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜಯಂತಿ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಅವರ ಜಯಂತಿ ಆಚರಿಸಲಾಯಿತು.
ಮೈಸೂರಿನ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ ಸಂಸ್ಥೆಯ ಆವರಣದಲ್ಲಿರುವ ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಗಣ್ಯರುಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು.
ಇದೇ ವೇಳೆ ಹಿರಿಯ ಸಾಹಿತಿ ಹೊರೆಯಾಲ ದೊರೆಸ್ವಾಮಿ ರಚಿಸಿರುವ “ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ವಿಶ್ವೇಶ್ವರಯ್ಯನವರ ಪ್ರತಿಮೆ ವಿವಾದ” ಎಂಬ ಪುಸ್ತಕ ಲೋಕಾರ್ಪಣೆಗೊಳಿಸಲಾಯಿತು.
ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಇಬ್ಬರೂ ರಾಮ ಮತ್ತು ಆಂಜನೇಯ ಇದ್ದಂತೆ ಎಂದು ಬಣ್ಣಿಸಿದರು. ಅವರಿಬ್ಬರ ದೂರದೃಷ್ಟಿಯ ಫಲವಾಗಿ ಕೆ.ಆರ್.ಎಸ್ ಜಲಾಶಯ ನಿರ್ಮಾಣವಾಗಿದೆ. ಕೆ.ಆರ್.ಎಸ್ ನಲ್ಲಿ ಅವರಿಬ್ಬರ ಪ್ರತಿಮೆ ಸ್ಥಾಪಿಸುವುದಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು. ರಾಮನ ಜೊತೆ ಆತನ ಭಂಟ ಹನುಮಂತ ಇರುವಂತೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಜೊತೆ ವಿಶ್ವೇಶ್ವರಯ್ಯ ಅವರ ಪ್ರತಿಮೆ ಪ್ರತಿಷ್ಠಾಪನೆ ಮಾಡುವುದರಿಂದ ಇಬ್ಬರಿಗೂ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.
ಮುಡಾ ಅಧ್ಯಕ್ಷ ಹೆಚ್. ವಿ. ರಾಜೀವ್, ಡಿ.ಟಿ.ಪ್ರಕಾಶ್, ಡಾ.ರಘುರಾಮ್ ವಾಜಪೇಯಿ, ವಿಕ್ರಂ ಅಯ್ಯಂಗಾರ್ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. (ಕೆ.ಎಸ್,ಎಸ್.ಎಚ್)