ಪ್ರಮುಖ ಸುದ್ದಿಮನರಂಜನೆಮೈಸೂರು

ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವುದು ಅತ್ಯಂತ ಔಚಿತ್ಯಪೂರ್ಣ : ಸಿಎಂ ಬಿ.ಎಸ್. ಯಡಿಯೂರಪ್ಪ

ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಆನ್ ಲೈನ್ ಮೂಲಕ ಶಂಕು ಸ್ಥಾಪನೆ ನೆರವೇರಿಸಿದ ಸಿಎಂಬಿಎಸ್ ಯಡಿಯೂರಪ್ಪ


ಮೈಸೂರು,ಸೆ.15:- ವಿಷ್ಣುವರ್ಧನ್ ಕನ್ನಡ ನಾಡು ಕಂಡ ಅಪ್ರತಿಮ ಕಲಾ ನಟರಲ್ಲೇ ಪ್ರಮುಖರು. ಶ್ರೇಷ್ಠ ನಾಯಕ ನಟರು ಮಾತ್ರವಲ್ಲದೇ ತಮ್ಮ ವ್ಯಕ್ತಿತ್ವದಲ್ಲೂ ಶ್ರೇಷ್ಠ ಗುಣವನ್ನು ಹೊಂದಿದ್ದು ಯುವಜನರಿಗೆ ಸ್ಪೂರ್ತಿಯ ಸೆಲೆಯಾಗಿದ್ದರು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದರು.

ಅವರಿಂದು ಮೈಸೂರಿನ ಹೆಚ್.ಡಿ.ಕೋಟೆ ರಸ್ತೆಯಲ್ಲಿರುವ ಉದ್ಭೂರು ಗೇಟ್ ಬಳಿ ಹಾಲಾಳು ವಿನಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಆನ್ ಲೈನ್ ಮೂಲಕವೇ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು. ಶಿಸ್ತು ಸಂಯಮ ಗಳಿಂದ ವಿಷ್ಣು ಎಲ್ಲರ ಪ್ರೀತಿಯನ್ನು ಗಳಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಡಾ.ರಾಜ್ ಕುಮಾರ್ ಅವರ ನಂತರ ಪೀಳಿಗೆಯಲ್ಲಿ ಮಹತ್ವದ ಕೊಡುಗೆ ನೀಡುವಲ್ಲಿ ಡಾ.ವಿಷ್ಣುವರ್ಧನ್ ಕೂಡ ಸೇರಿದ್ದಾರೆ. ಸತತವಾಗಿ 38ವರ್ಷಗಳ ಕಾಲ ನೂರಾರು ಸದಭಿರುಚಿಯ ಚಿತ್ರಗಳನ್ನು ಮಾಡುವ ಮೂಲಕ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಾಗರಹಾವು ಸಿನಿಮಾದಿಂದ ಆಪ್ತರಕ್ಷಕ ಸಿನಿಮಾವರೆ ಗಿನ ಅವರ ಸಾಧನೆಯನ್ನು ನಾನು ಸಾಕಷ್ಟು ಗಮನಿಸಿದ್ದೇನೆ. ಅವರು ಸಿನಿಮಾ ಜೊತೆಗೆ ವಿಶೇಷವಾಗಿ ಸಾಮಾಜಿಕ ಕಾಳಜಿಯನ್ನು ಹೊಂದಿದ್ದರು. ಸಮಾಜದ ಆಗು ಹೋಗುಗಳ ಬಗ್ಗೆ ಸ್ಪಂದಿಸುವ ಮ ತ್ತು ಮಾನವೀಯತೆ ತೋರಿಸುವ ವಿಶೇಷ ಗುಣ ಕೂಡ ಅವರಲ್ಲಿತ್ತು. ಡಾ,ವಿಷ್ಣುವರ್ಧನ್ ಅವರ ಶ್ರೀಮತಿಯವರಾದ ಪದ್ಮಶ್ರೀ ಪುರಸ್ಕೃತರಾದ ಡಾ. ಭಾರತೀ ವಿಷ್ಣುವರ್ಧನ್ ಬಹುಭಾಷಾ ತಾರೆಯಾಗಿ, ಅತ್ಯುತ್ತಮ ಕಲಾವಿದೆಯಾಗಿ ನಮ್ಮ ನಾಡಿನಲ್ಲಿರುವುದು ಸಂತಸದ ಸಂಗತಿ ಭಾರತೀ ದಂಪತಿಯ ಅಳಿಯ ಅನಿರುದ್ಧ ಆವರು ಉತ್ತಮ ಕಲಾವಿದರೂ ಸಜ್ಜನಿಕೆಯ ವ್ಯಕ್ತಿಯಾಗಿದ್ದಾರೆ ಎಂದರು
ಡಾ.ವಿಷ್ಣುವರ್ಧನ್ ಸ್ಮಾರಕ ಈಗಾಗಲೇ ತಡವಾಗಿದೆ. ಆದ್ದರಿಂದ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಹಾಲಾಳು ಗ್ರಾಮದ 5ಎಕರೆ ಜಾಗದಲ್ಲಿ ಪೊಲೀಸ್ ವಸತಿ ನಿಗಮ ವತಿಯಿಂದ ಕಾಮಗಾರಿ ಆರಂಭವಾಗಲಿದೆ. ಸ್ಮಾರಕ ನಿರ್ಮಾಣ ಕಾಮಗಾರಿಗೆ 11ಕೋಟಿ ಮಂಜೂರಾಗಿದ್ದು ಕಾಮಗಾರಿ ಆರಂಭಿಸಲು ಈಗಾಗಲೇ 5ಕೋಟಿ ಅನುದಾನವನ್ನು ಬಿಡಗಡೆ ಮಾಡಲಾಗಿದೆ. ಡಾ.ವಿಷ್ಣುವರ್ಧನ್ ಸ್ಮಾರಕ ಸುಸಜ್ಜಿತವಾಗಿ ನಿಮಾಣ ಮಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲು ಬದ್ಧರಾಗಿದ್ದೇವೆ. ಡಾ.ವಿಷ್ಣುವರ್ಧನ್ ಅವರ ಕೀರ್ತಿ ಜನಮಾನಸದಲ್ಲಿ ಎಂದಿಗೂ ಅಜರಾಮರವಾಗಿರಲಿ, ಅವರ ನಟನಾ ಕೌಶಲ ಸವರ ಸಾಧನೆಯ ಹಾದಿ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಲಿ ಎಂದರು.

ಕಲಾವಿದೆ, ವಿಷ್ಣು ಅವರ ಪತ್ನಿ ಭಾರತೀ ವಿಷ್ಣುವರ್ಧನ್ ಮಾತನಾಡಿ ಇದು ವಿಶೇಷ ದಿನ. ನಾವು ಯಾವತ್ತೂ ಮರೆಯಲಾಗದ ದಿನ. ನೀವೆಲ್ಲರೂ ಬಹಳವಾಗಿ ಪ್ರೀತಿಸುವ, ಇಷ್ಟಪಡುವ ಡಾ.ವಿಷ್ಣುವರ್ಧನ್ ಅವರ ದಿನ ಜನರ ಮನಸ್ಸಿನಲ್ಲಿ ಯಾವತ್ತಿಗೂ ಶಾಶ್ವತವಾಗಿ ಉಳಿಯುವಂತಹ ದಿನ ಹತ್ತು ವರ್ಷಗಳಿಂದ ಕಾಯುತ್ತಿದ್ದ ಸ್ಮಾರಕ ನಿರ್ಮಾಣವಾಗುವ ಕನಸು ಸಾಕಾರವಾಗುವ ದಿನ. ಸಿಎಂ ಅಧಿಕೃತವಾಗಿ ಚಾಲನೆ ನೀಡಿದ್ದು ಕೃತಜ್ಞತೆ ಅರ್ಪಿಸಿದರು. ಸಾರ್ಥಕ ಕಾರ್ಯಕ್ರಮ ನಡೆಯಲು ಅವರು ತೋರಿದ ಪ್ರೀತಿಗೆ, ಕಾಳಜಿಗೆ ಹೃದಯಪೂರ್ವಕ ವಂದನೆಗಳನ್ನು ಸಲ್ಲಿಸಿದರು.
ಶಾಸಕ ಜಿ.ಟಿ.ದೇವೇಗೌಡ ಅವರು ಮಾತನಾಡಿ ವಿಷ್ಣುವರ್ಧನ್ ಅಂದರೆ ಮೈಸೂರು, ಮೈಸೂರು ಅಂದರೆ ವಿಷ್ಣುವರ್ಧನ್ ಎನ್ನುವಷ್ಟರ ಮಟ್ಟಿಗೆ ಪ್ರಖ್ಯಾತರಾಗಿದ್ದರು. 10ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸ್ಮಾರಕ 11ಕೋಟಿ ವೆಚ್ಚದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಂದ ಶಂಕು ಸ್ಥಾಪನೆಗೊಂಡಿರುವುದು ಸಂತಸದ ವಿಷಯ ಎಂದರು.
ಶಾಸಕ ಎಸ್.ಎ.ರಾಮದಾಸ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ,ಜಿಲ್ಲಾಧಿಕಾರಿ ಬಿ.ಶರತ್, ನಟ ಅನಿರುದ್ಧ, ಕೀರ್ತಿ ಅನಿರುದ್ಧ ಮತ್ತಿತರರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: