ಮೈಸೂರು

ಮೊಬೈಲ್ ನೋಡದಂತೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗಳು ಆತ್ಮಹತ್ಯೆ

ಮೈಸೂರು,ಸೆ.15:-ಮೊಬೈಲ್ ಹೆಚ್ಚಾಗಿ ನೋಡಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗಳು ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಎನ್.ಆರ್.ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿ ನಡೆದಿದೆ.
ಮೃತಳನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಿಕಾನ್(19)ಎಂದು ಹೇಳಲಾಗಿದೆ. ಈಕೆ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ನಿಕಾನ್ ಯಾವಾಗಲು ಮೊಬೈಲ್ ನೋಡುವುದರಲ್ಲೇ ಮುಳುಗಿರುತ್ತಿದ್ದಳು. ಓದಿನ ಕಡೆ ಗಮನ ಹರಿಸುವಂತೆ ತಾಯಿ ಬಿದ್ಧಿಮಾತು ಹೇಳಿದ್ದರು. ಇದರಿಂದ ಬೇಸತ್ತ ನಿಕಾನ್ ಕೊಠಡಿಗೆ ಹೋದವಳು ಎಷ್ಟು ಹೊತ್ತಾದರೂ ಹೊರಗೆ ಬಂದಿರಲಿಲ್ಲ. ಅನುಮಾನದಿಂದ ಪರಿಶೀಲಿಸಿದಾಗ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.
ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: