ಪ್ರಮುಖ ಸುದ್ದಿಮನರಂಜನೆ

ಶೂಟಿಂಗ್ ವೇಳೆಯೇ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಸಿದ್ದ ಮಲಯಾಳಂ ನಟ ಸಾವು

ದೇಶ(ಕೊಚ್ಚಿ)ಸೆ.16:- ಶೂಟಿಂಗ್ ವೇಳೆಯೇ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಸಿದ್ದ ಮಲಯಾಳಂ ನಟ ಪ್ರಬೀಶ್ ಚಕ್ಕಲಕ್ಕಲ್ ಸಾವನ್ನಪ್ಪಿದ್ದಾರೆ.

ಅವರಿಗೆ ಕೇವಲ 44ವರ್ಷ ವಯಸ್ಸಾಗಿತ್ತು. ನಟ ಪ್ರಬೀಶ್ ಚಕ್ಕಲಕ್ಕಲ್ ಅವರು ಮಲಯಾಳಂ ಚಲನಚಿತ್ರಗಳಲ್ಲಿ ಅಭಿನಯಿಸುತ್ತಿದ್ದು ಅವರು ದಕ್ಷಿಣ ಭಾರತದ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದ ಶೂಟಿಂಗ್ ಸಮಯದಲ್ಲಿ ನಟ ಕುಸಿದು ಬಿದ್ದು ಪ್ರಜ್ಞೆ ತಪ್ಪಿ ಸಾವಿಗೀಡಾಗಿದ್ದಾರೆ.
ಕೇರಳದ ಕೊಚ್ಚಿಯಲ್ಲಿ ಪ್ರಬೀಶ್ ಯೂಟ್ಯೂಬ್ ಚಾನೆಲ್ ಚಿತ್ರೀಕರಣದಲ್ಲಿದ್ದಾಗ ಈ ಘಟನೆ ನಡೆದಿದೆ.

ಪ್ರಬೀಶ್ ಹಲವು ಟೆಲಿಫಿಲಮ್ ಗಳಲ್ಲಿ ಅಭಿನಯಿಸಿದ್ದರು, ಡಬ್ಬಿಂಗ್ ಕಲಾವಿದನಾಗಿ, ಅವರು ಅನೇಕ ಪ್ರಸಿದ್ಧ ಮಲಯಾಳಂ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಪ್ರಬೀಶ್ ತಂದೆ, ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: