ಪ್ರಮುಖ ಸುದ್ದಿ

ಮುಂದುವರಿದ ಕೊರೋನಾ ಅಬ್ಬರ : ರಾಜ್ಯದಲ್ಲಿ 7,576 ಮಂದಿಗೆ ಕೊರೋನಾ ವೈರಸ್ ಸೋಂಕು

ರಾಜ್ಯ( ಬೆಂಗಳೂರು)ಸೆ.16:- ಕರ್ನಾಟಕದಲ್ಲಿ ಕೊರೋನಾ ವೈರಸ್ ಅಬ್ಬರ ಮುಂದುವರಿದಿದ್ದು, 7,576 ಮಂದಿಗೆ ಕೊರೋನಾ ವೈರಸ್ ಸೋಂಕು ತಗುಲಿದ್ದು, 97 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,75,265ಕ್ಕೇರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 97 ಮಂದಿ ಮೃತಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,481ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 41 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 97 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,084 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,76,712ಕ್ಕೆ ಏರಿಕೆಯಾಗಿದೆ.
7,406 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,69,299ಕ್ಕೆ ಏರಿಕೆಯಾಗಿದೆ. 98,536 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: