ಮೈಸೂರು

ಇಂದಿನಿಂದ ಮೂರು ದಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಮೈಸೂರು,ಸೆ.16:- ಇಂದಿನಿಂದ ಮೂರು ದಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.
ಕೊರೋನಾ ಪಾಸಿಟಿವ್ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಭಕ್ತರ ದರ್ಶನಕ್ಕೆ ನಿರ್ಬಂಧ ವಿಧಿಸಿದ್ದು, ನಿರ್ಬಂಧದ ಹಿನ್ನಲೆಯಲ್ಲಿ ಬೆಟ್ಟದ ಪಾದ ಬಳಿ ಪೊಲೀಸರನ್ನು ನಿಯೋಜನೆ ಮಾಡಿದೆ. ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ರಸ್ತೆ ಬಂದ್ ಮಾಡಿದ್ದಾರೆ. ದೇವಸ್ಥಾನಕ್ಕೆ ತೆರಳಲೆಂದು ಬಂದ ಭಕ್ತಾದಿಗಳನ್ನು ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ. ನಾಳೆ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: