ಮೈಸೂರು

ಕಾಡಾನೆಗಳ ದಾಳಿಯಿಂದಾಗಿ ರೈತರು ಬೆಳೆದ ಬೆಳೆಗಳು ನಾಶ

ಮೈಸೂರು,ಸೆ.16:-ಕಾಡಾನೆಗಳ ದಾಳಿಯಿಂದಾಗಿ ರೈತರು ಬೆಳೆದ ಬೆಳೆಗಳು ನಾಶವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.
ಎಚ್ .ಡಿ ಕೋಟೆ ತಾಲೂಕಿನ ಕಲ್ಲಹಳ್ಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಕಾಟ ಹೆಚ್ಚಾಗಿದೆ. ಅರಣ್ಯವ್ಯಾಪ್ತಿಯ ಮೊಳೆಯೂರು ವಲಯ ಕಾಡಂಚಿನ ಈ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿಯಿಂದಾಗಿ ಬಾಳೆ, ನವಣೆ ಹಾಗೂ ತರಕಾರಿ ಬೆಳೆಗಳು ನಾಶವಾಗಿವೆ. ಬೆಳೆಯಷ್ಟೇ ಅಲ್ಲ ರೈತರ ಪಂಪಸೆಟ್, ತಂತಿ ಬೇಲಿ ತುಳಿದು ಕಾಡಾನೆಗಳು ದಾಂಧಲೆ ನಡೆಸಿದ್ದು ಇದರಿಂದಾಗಿ ರೈತರು ಲಕ್ಷಾಂತರ ರೂ ನಷ್ಟ ಅನುವಭವಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: