ಕರ್ನಾಟಕಪ್ರಮುಖ ಸುದ್ದಿ

ಶಿರಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಬೆಂಗಳೂರು,ಸೆ.16-ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿರಾ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದಾರೆ.

ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರೇ ಟಿ.ಬಿ.ಜಯಚಂದ್ರ ಅವರ ಹೆಸರು ಸೂಚಿಸಿದ್ದಾರೆ. ರಾಜಣ್ಣ ಅವರ ಅಭಿಪ್ರಾಯವನ್ನು ನಾವು ಪಡೆದಿದ್ದೇವೆ. ನಮ್ಮ ಪಕ್ಷದ ವರಿಷ್ಠರಿಗೆ ಇದನ್ನೇ ಕಳಿಸಿಕೊಡುತ್ತೇವೆ ಎಂದಿದ್ದಾರೆ.

ಇಂದಿನಿಂದಲೇ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೆವೆ. ನಾವೆಲ್ಲರೂ ಅವರಿಗೆ ಸಾಥ್ ಕೊಡುತ್ತಿದ್ದೇವೆ. ಶಿರಾ ಉಪಚುನಾವಣೆಯನ್ನು ಮಾಜಿ ಗೃಹಸಚಿವ ಡಾ.ಪರಮೇಶ್ವರ್ ನೇತೃತ್ವತ್ವದಲ್ಲಿ ಎದುರಿಸುತ್ತೇವೆ. ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಉಪಾಧ್ಯಕ್ಷರಾಗಿ ಜೊತೆಗೆ ಇರಲಿದ್ದಾರೆ. ಒಟ್ಟಿಗೆ ಎಲ್ಲರೂ ಸೇರಿಯೇ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ.

ಶಿರಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಎನ್.ರಾಜಣ್ಣ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಅಣತಿಯಂತೆ ಕೆಲಸ ಮಾಡುತ್ತೇವೆ. ಶಿರಾ ಕ್ಷೇತ್ರದಲ್ಲಿ ಗೆಲ್ಲುವುದು ನಮ್ಮ ಗುರಿ ಎಂದಿದ್ದಾರೆ. (ಎಂ.ಎನ್)

Leave a Reply

comments

Related Articles

error: