ದೇಶ

ರಾಜಸ್ಥಾನದ ಚಂಬಲ್ ನದಿಯಲ್ಲಿ ದೋಣಿ ಮುಳುಗಿ 14 ಮಂದಿ ದುರ್ಮರಣ: ಹಲವರು ನಾಪತ್ತೆ

ಕೋಟಾ,(ರಾಜಸ್ಥಾನ),ಸೆ.16-ರಾಜಸ್ಥಾನದ ಕೋಟಾ ಜಿಲ್ಲೆಯ ಚಂಬಲ್‌ ನದಿಯಲ್ಲಿ ಇಂದು ಬೆಳಿಗ್ಗೆ ಪ್ರಯಾಣಿಕ ದೋಣಿ ಮಗುಚಿ 14 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ನಾಪತ್ತೆಯಾದವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, 25 ಮಂದಿಯನ್ನು ರಕ್ಷಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ ಹಾಗೂ ರಾಜ್ಯ ವಿಪತ್ತು ನಿರ್ವಹಣೆ ಪಡೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ.

40ಕ್ಕೂ ಹೆಚ್ಚು ಮಂದಿ ದೋಣಿಯಲ್ಲಿದ್ದರು. ಕೆಲವರು ಮೋಟಾರ್ ಸೈಕಲ್‌ಗಳನ್ನು ಸಾಗಿಸುತ್ತಿದ್ದರು. ಈ ವೇಳೆ ದೋಣಿ ಭಾರಕ್ಕೆ ಮುಗುಚಿಕೊಂಡಿದೆ. 20ಕ್ಕೂ ಹೆಚ್ಚು ಮಂದಿ ಮಂದಿ ಈಜಿ ದಡ ಸೇರಿದ್ದಾರೆ. ಕೆಲವರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ಕೋಟಾ ಪೊಲೀಸ್‌ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: