ಪ್ರಮುಖ ಸುದ್ದಿ

ವಿಧಾನಮಂಡಲ ಕಲಾಪ ಹಿನ್ನೆಲೆ : ಶಿಕ್ಷಕರ ಕ್ಷೇತ್ರದ ಎಲ್ಲ ಪಕ್ಷಗಳ ಸದಸ್ಯರ ಜತೆ ಮಹತ್ವದ ಮಾತುಕತೆ

ರಾಜ್ಯ(ಬೆಂಗಳೂರು)ಸೆ.17:- ವಿಧಾನಮಂಡಲ ಕಲಾಪ ಸೆ.21ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಎಲ್ಲ ಪಕ್ಷಗಳ ಸದಸ್ಯರ ಜತೆ ಮಹತ್ವದ ಮಾತುಕತೆ ನಡೆಯಿತು.
ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಹ್​​ ನಾರಾಯಣ್ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಳೆದ ಒಂದು ವರ್ಷದಿಂದ ಜಾರಿಗೆ ತಂದಿರುವ ವಿವಿಧ ಸುಧಾರಣೆಗಳ ಬಗ್ಗೆ ಮಾಹಿತಿ ನೀಡಿದರು. ಕೋವಿಡ್ ಬರುವ ಮುನ್ನ ಹಾಗೂ ಕೋವಿಡ್ ನಂತರ ಇಲಾಖೆಯಲ್ಲಿ ಅನುಷ್ಠಾನಗೊಂಡಿರುವ ಆನ್ ಲೈನ್ ಅಪ್ಲಿಕೇಷನ್, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕ್ರಮ ಸೇರಿ ಎಲ್ಲ ಕಾರ್ಯಕ್ರಮಗಳ ಬಗ್ಗೆ ಪರಿಷತ್ ಸದಸ್ಯರಿಗೆ ವಿವರ ನೀಡಿದ ಅವರು ಕೋವಿಡ್ ಹಿನ್ನೆಲೆಯಲ್ಲಿ ಡಿಜಿಟಲ್ ಲರ್ನಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಅದು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ ಎಂದರು. ಈ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಸದಸ್ಯರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದರು.

ವರ್ಗಾವಣೆ ನೀತಿ ಬದಲು ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಉಪನ್ಯಾಸಕರ ವರ್ಗಾವಣೆಯ ನಿಯಮಗಳನ್ನು ಬದಲಿಸಲಾಗುವುದು. ಈಗಿರುವ 2016ರ ವರ್ಗಾವಣೆ ಕಾಯ್ದೆಯನ್ನು ವಾಪಸ್ ಪಡೆದು ಸೂಕ್ತವಾದ ತಿದ್ದುಪಡಿಗಳೊಂದಿಗೆ ಹೊಸ ನಿಯಮಗಳನ್ನು ತರಲಾಗುವುದು. ಕಳೆದ ಅಧಿವೇಶನದಲ್ಲಿಯೇ ಇದರಲ್ಲಿ ಕೆಲ ತಿದ್ದುಪಡಿಗಳನ್ನು ಮಾಡುವ ಉದ್ದೇಶವಿತ್ತು. ಆದರೆ, ಆ ಕಾಯ್ದೆಯಲ್ಲಿ ಹಲವಾರು ದೋಷಗಳಿದ್ದ ಕಾರಣ ಇಡೀ ಕಾಯ್ದೆಯನ್ನೇ ವಾಪಸ್ ಪಡೆದು ಹೊಸ ನಿಯಮ ರೂಪಿಸಲು ನಿರ್ಧರಿಸಲಾಗಿದೆ. ಹೀಗೆ ಮಾಡುವುದರಿಂದ ವರ್ಗಾವಣೆ ನಿಯಮಗಳು ಸರಳವಾಗಿರುತ್ತವೆ, ಗೊಂದಲಗಳು ಇರುವುದಿಲ್ಲ ಎಂದು ಹೇಳಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: