ಪ್ರಮುಖ ಸುದ್ದಿ

ಗಾಂಜಾ ಬೆಳೆ ಸೇರಿದಂತೆ ಯಾವುದೇ ಮಾದಕ ವಸ್ತುಗಳ ಚಟುವಟಿಕೆಗಳಿಗೆ ಅವಕಾಶವಾಗದಂತೆ ಕಟ್ಟೆಚ್ಚರ ವಹಿಸಲು ಡಿಸಿ ಸೂಚನೆ

ರಾಜ್ಯ( ಚಾಮರಾಜನಗರ)ಸೆ.17:- ಚಾಮರಾಜನಗರ ಜಿಲ್ಲೆಯಲ್ಲಿ ಗಾಂಜಾ ಬೆಳೆ ಸೇರಿದಂತೆ ಯಾವುದೇ ಮಾದಕ ವಸ್ತುಗಳ ಚಟುವಟಿಕೆಗಳಿಗೆ ಅವಕಾಶವಾಗದಂತೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ, ಅಕ್ರಮ ನಡೆಸುವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚನೆ ನೀಡಿದ್ದಾರೆ.

ಡ್ರಗ್ಸ್‌ ದಂಧೆ ನಿಯಂತ್ರಣ ಸಂಬಂಧ ಪೊಲೀಸರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಯುವ ಜನಾಂಗವನ್ನು ತಪ್ಪು ದಾರಿಗೆ ಕರೆದೊಯ್ದು ಸಮಾಜದ ಸ್ವಾಸ್ಥ್ಯ ಹಾಳುಮಾಡುವ ಮಾದಕ ವಸ್ತುಗಳಿಗೆ ಸಂಬಂಧಿಸಿದ ಯಾವುದೇ ಚಟುವಟಿಕೆಗಳು ಜಿಲ್ಲೆಯಲ್ಲಿ ನಡೆಯದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಕಂದಾಯ, ಅಬಕಾರಿ, ಅರಣ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸಂಘಟಿತರಾಗಿ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕಲು ವಿಶೇಷ ಕಣ್ಗಾವಲು ಇರಿಸಬೇಕು’ ಎಂದು ನಿರ್ದೇಶನ ನೀಡಿದ್ದಾರೆ.

ಸರ್ಕಾರಿ ಜಮೀನಿರಲಿ ಅಥವಾ ಖಾಸಗಿಯವರ ಭೂಮಿಯೇ ಇರಲಿ, ಎಲ್ಲ ಕಡೆ ಕಂದಾಯ ಅಧಿಕಾರಿಗಳು ನಿಗಾ ಇಟ್ಟಿರಬೇಕು. ಯಾವ ಬೆಳೆ ಬೆಳೆಯಲಾಗುತ್ತಿದೆ ಎಂಬ ಮಾಹಿತಿಯನ್ನು ಆಯ ಗ್ರಾಮಲೆಕ್ಕಿಗರಿಂದ ಮಾಹಿತಿ ಸಂಗ್ರಹಣೆ ಮಾಡಬೇಕು. ಗಾಂಜಾ ಸೇರಿದಂತೆ ಯಾವುದೇ ಮಾದಕ ವಸ್ತುಗಳ ಬೆಳೆ ಬೆಳೆದಿರುವುದು ಕಂಡು ಬಂದಲ್ಲಿ ಕೂಡಲೇ ವರದಿ ಮಾಡಿ ಪ್ರಕರಣ ದಾಖಲಿಸಬೇಕು. ಆರ್‌ಟಿಸಿ ಹೊಂದಿರುವ ಮಾಲೀಕರ ವಿರುದ್ದವೇ ಮೊದಲು ಪ್ರಕರಣ ಹೂಡಬೇಕು’ ಎಂದು ಸೂಚಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: