ಮೈಸೂರು

ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ಮೈಸೂರು ಪ್ರವಾಸ

ಮೈಸೂರು.ಸೆಪ್ಟೆಂಬರ್.17:- ನಗರದ ನಜರ್ಬಾದ್ನ ಪೀಪಲ್ಸ್ ಪಾರ್ಕ್ನ ಗ್ರಂಥಾಲಯ ನಿವೇಶನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನಗರ ಕೇಂದ್ರ ಗ್ರಂಥಾಲಯ ಕಟ್ಟಡವನ್ನು ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10.30 ಗಂಟೆಗೆ ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸುವರು.
ಇದೇವೇಳೆ ಡಿಜಿಟಲ್ ಗ್ರಂಥಾಲಯವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್.ಸುರೇಶ್ ಕುಮಾರ್ ಅವರು ಉದ್ಘಾಟಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಲ್.ನಾಗೇಂದ್ರ ಅವರು ವಹಿಸಲಿದ್ದು, ಪುಸ್ತಕ ಪ್ರದರ್ಶನ ಉದ್ಘಾಟನೆಯನ್ನು ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರು ಹಾಗೂ ನಗರ ಗ್ರಂಥಾಲಯದ ಪ್ರಾಧಿಕಾರದ ಅಧ್ಯಕ್ಷರಾಗಿರುವ ತಸ್ನೀಂ ಅವರು ಉದ್ಘಾಟಿಸುವರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: