
ಮೈಸೂರು
ಪ್ರಧಾನಿ ಜನ್ಮ ದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮ ಉದ್ಘಾಟಿಸಿದ ಸಾಹಿತಿ ಎಸ್.ಎಲ್.ಭೈರಪ್ಪ
ಮೈಸೂರು,ಸೆ.17 :- ಇಂದು ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನದ ಪ್ರಯುಕ್ತ ‘ನಮೋ ದಿವಸ್ ನಮಸ್ಕಾರ್’ ಶೀರ್ಷಿಕೆ ಅಡಿಯಲ್ಲಿ ವಿದ್ಯಾರಣ್ಯಪುರಂ ರಾಮಲಿಂಗೇಶ್ವರ ಉದ್ಯಾನವನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಲ್ ಭೈರಪ್ಪನವರು ಆನ್ ಲೈನ್ ಮೂಲಕ ಚಾಲನೆ ನೀಡಿದರು.
ಬಿಜೆಪಿ ಕಾರ್ಯಕರ್ತರೋರ್ವರು ಪ್ರಧಾನಿ ಮೋದಿಯವರ ಚಿತ್ರವನ್ನು ವೇದಿಕೆಯಲ್ಲಿಯೇ ರಚಿಸಿದರು. ಈ ವೇಳೆ ಮಾತನಾಡಿದ ಶಾಸಕ ಎಸ್.ಎ.ರಾಮದಾಸ್ ಪ್ರಧಾನಿ ಮೋದಿಯವರ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ 70 ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅನೇಕ ಸ್ಪರ್ಧೆಗಳನ್ನು ಕೂಡ ಹಮ್ಮಿಕೊಳ್ಳಲಾಗಿದೆ. ಗೆದ್ದವರಿಗೆ ವಿಶೇಷ ಬಹುಮಾನ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ ದೇವೇಗೌಡ, ಮಾಜಿ ಸಚಿವ ಸಿ.ಎಚ್ ವಿಜಯಶಂಕರ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. (ಕೆ.ಎಸ್,ಎಸ್.ಎಚ್)