ಕರ್ನಾಟಕಪ್ರಮುಖ ಸುದ್ದಿ

ಡ್ರಗ್ಸ್ ಮಾಫಿಯಾ ಪ್ರಕರಣ: ನ್ಯಾಯಾಂಗ ತನಿಖೆ ನಡೆಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಸೆ.17-ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಸತ್ಯಾಸತ್ಯತೆ ಹೊರಬರುವ ನಿಟ್ಟಿನಲ್ಲಿ ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲಿ ಎಂದು ಒತ್ತಾಯಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ಬಂಧನ ಆಗಿಲ್ಲ. ಈ ಕುರಿತು ಪೊಲೀಸರ ಬಳಿ ವಿಚಾರಿಸಿದ್ದೇನೆ. ಕೆಲವರನ್ನು ಬಂಧಿಸಿಲ್ಲವೇಕೆ ಎಂದು ಕೇಳಿದೆ. ಅವರು ತಲೆ ಮರೆಸಿಕೊಂಡಿದ್ದಾರೆ ಎನ್ನುತ್ತಾರೆ. ಇದನ್ನೆಲ್ಲಾ ಗಮನಿಸಿದರೆ ಪೊಲೀಸರ ಮೇಲೆ ಸರ್ಕಾರ ಒತ್ತಡನೂ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

ಪ್ರಕರಣದಲ್ಲಿ ಪೊಲೀಸರ ವಿಫಲತೆ ಅನ್ನುವುದಕ್ಕಿಂತ ಪೊಲೀಸರು ಸರ್ಕಾರದ ಕೈಗೊಂಬೆ ತರ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಪೊಲೀಸರಲ್ಲಿ ನಂಬಿಕೆ ಇಲ್ಲ. ಸರ್ಕಾರದ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಇಬ್ಬರು ಸಿಎಂ: ಸರ್ಕಾರಿ ವೈದ್ಯಾಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಸಭೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಬಿ.ವೈ.ವಿಜಯೇಂದ್ರ ವೈದ್ಯಾಧಿಕಾರಿಗಳ ಜೊತೆಗೆ ಹೇಗೆ ಸಭೆ ನಡೆಸುತ್ತಾರೆ. ಬಿಜೆಪಿನ ಪಕ್ಷದಲ್ಲಿ ಬೇರೆ ಉಪಾಧ್ಯಕ್ಷರು ಇಲ್ವಾ? ಅವರಿಗೆ ಸಭೆ ನಡೆಸುವ ಅಧಿಕಾರ ಇದ್ಯಾ ಎಂದು ಪ್ರಶ್ನಿಸಿದರು. ಆಯಾ ಇಲಾಖೆಗೆ ಸೇರಿದ ಸಚಿವರು ಸಭೆ ನಡೆಸಲು ನಮ್ಮ ಕೈಯಲ್ಲಿ ಸಾಧ್ಯವಿಲ್ಲ ನೀವೇ ಮಾಡಿ ಎಂದು ಹೇಳಿದ್ದಾರಾ ಎಂದು ಖಡಕ್ ಆಗಿ ಪ್ರಶ್ನಿಸಿದರು. (ಎಂ.ಎನ್)

Leave a Reply

comments

Related Articles

error: