ಪ್ರಮುಖ ಸುದ್ದಿ

ರಾಜ್ಯದಲ್ಲಿ 9366 ಮಂದಿಗೆ ಪಾಸಿಟಿವ್ ದೃಢ : 93ಮಂದಿ ಬಲಿ

ರಾಜ್ಯ(ಬೆಂಗಳೂರು)ಸೆ.18:- ಕರ್ನಾಟಕದಲ್ಲಿ ಕೊರೋನಾ ವೈರಸ್ ಮಹಾಮಾರಿಯ ಅಬ್ಬರ ಮುಂದುವರೆದಿದ್ದು 9366 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.93ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,94,356ಕ್ಕೆ ಏರಿಕೆಯಾಗಿದ್ದು,ಮೃತಪಟ್ಟವರ ಸಂಖ್ಯೆ 7629ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 34 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 93 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3799 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,84,082ಕ್ಕೆ ಏರಿಕೆಯಾಗಿದೆ.
7268 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,83,077ಕ್ಕೆ ಏರಿಕೆಯಾಗಿದೆ. 1,03631 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 805 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: