ನಮ್ಮೂರುಪ್ರಮುಖ ಸುದ್ದಿಮೈಸೂರು

ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಸಾಂಸ್ಕೃತಿಕ ನಗರಿ ಮೈಸೂರು ದಸರಾ ಉತ್ಸವಕ್ಕೆ ಸಕಲ ರೀತಿಯಿಂದಲೂ ಸಿದ್ಧಗೊಂಡಿದ್ದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ದಸರಾ ಉತ್ಸವ ಪ್ರಯುಕ್ತ ಪ್ರತಿವರ್ಷವೂ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತಿದ್ದು, ಈ ಬಾರಿಯೂ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಅರಮನೆ ಸುತ್ತಮುತ್ತ ರಸ್ತೆಗಳು, ನ್ಯೂ.ಎಸ್.ಆರ್.ರಸ್ತೆ, ಬಿ.ಎನ್.ರಸ್ತೆ, ಬನುಮಯ್ಯ ರಸ್ತೆ, ತ್ಯಾಗರಾಜ ರಸ್ತೆಗಳಲ್ಲಿ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕೆ.ಎಸ್.ಆರ್.ಟಿ.ಸಿ ಗ್ರಾಮಾಂತರ ಬಸ್ಸುಗಳ ಸಂಚಾರ ಮಾರ್ಗದಲ್ಲಿಯೂ ಬದಲಾವಣೆ ಮಾಡಲಾಗಿದೆ. ಅಕ್ಟೋಬರ್ 10 ಮತ್ತು 11ರಂದು ಸಾರಿಗೆ ಬಸ್ಸುಗಳಿಗೆ ನಗರದ ಹೊರಭಾಗದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ.

Leave a Reply

comments

Related Articles

error: