ಮೈಸೂರು

ಅರಮನೆ ಆಡಳಿತ ಮಂಡಳಿಯ ಉಪನಿರ್ದೇಶಕರಾಗಿರುವ ಟಿ.ಎಸ್.ಸುಬ್ರಹ್ಮಣ್ಯರನ್ನು ಸೇವೆಯಿಂದ ವಜಾಗೊಳಿಸಲು ದಸಂಸ ಒತ್ತಾಯ

ಮೈಸೂರು,ಸೆ.18:- ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕರಾಗಿರುವ ಟಿ.ಎಸ್.ಸುಬ್ರಹ್ಮಣ್ಯ ಭ್ರಷ್ಟರಾಗಿದ್ದು ಅವರನ್ನು ಸೇವೆಯಿಂದ ವಜಾಗೊಳಿಸಿ, ಮೈಸೂರು ಅರಮನೆಯ ಘನತೆ ಗೌರವ ಸಾರ್ವಜನಿಕರ ಹಣ ಉಳಿಸುವಂತೆ ದಲಿತ ಸಂಘರ್ಷ ಸಮಿತಿಯು ಒತ್ತಾಯಿಸಿದೆ. ಅಷ್ಟೇ ಅಲ್ಲದೆ ಸೆ.24ರಂದು ಅರಮನೆಯ ಆಡಳಿತ ಮಂಡಳಿಯ ಕಛೇರಿಯ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ.
ಮೈಸೂರು ಪತ್ರಕರ್ತ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಪದಾಧಿಕಾರಿ ಚೋರನಹಳ್ಳಿ ಶಿವಣ್ಣ ಮಾತನಾಡಿ ವಿಶ್ವವಿಖ್ಯಾತ ಮತ್ತು ಐತಿಹಾಸಿಕ ಸ್ಮಾರಕವಾದ ಅರಮನೆಯನ್ನು ಸಂರಕ್ಷಿಸಿ ಇದರ ಘನತೆಯನ್ನು ಕಾಪಾಡುವ ಸಲುವಾಗಿ ಸರ್ಕಾರ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ಪಾರಂಪರಿಕ ಇಲಾಖೆಯಿಂದ ಬೇರ್ಪಡಿಸಿ ಮೈಸೂರು ಅರಮನೆ ಮಂಡಳಿಗೆ ವಹಿಸಿದೆ. ಮೈಸೂರಿನ ಶ್ರೀಜಯಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿ ಇಲ್ಲಿಗೆ 15/7/1998ರಲ್ಲಿ ಹಿರಿಯ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ನೇಮಕಗೊಂಡ ಟಿ.ಎಸ್.ಸುಬ್ರಹ್ಮಣ್ಯ ಅವರು ಕೇವಲ 01ವರ್ಷ 7ತಿಂಗಳು ಮಾತ್ರ ಕಾವಾದಲ್ಲಿ ಕರ್ತವ್ಯ ನಿರ್ವಹಿಸಿ ನಂತರ 10ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರುಗಳ ಆಪ್ತ ಸಹಾಯಕರಾಗಿ ನಿಯೋಜನೆಗೊಂಡು ಕೆಲಸಕ್ಕೆ ಸೇರಿದ 2ವರ್ಷಗಳಲ್ಲೇ ಬಡ್ತಿ ಪಡೆದು ವಿದ್ಯಾರ್ಥಿಗಳಿಗೆ ಬೋಧನೆ ಮಾಡದೆ ವಿದ್ಯಾರ್ಥಿಗಳನ್ನು ವಂಚಿಸಿದ್ದಲ್ಲದೆ ಕರ್ನಾಟಕ ನಾಗರೀಕ ಸೇವಾ ನಿಯಮಗಳನ್ನು ಉಲ್ಲಂಘಿಸಿ 11ವರ್ಷ 8ತಿಂಗಳಲ್ಲಿ ಅಕ್ರಮವಾಗಿ 3ಬಾರಿ ಪದೋನ್ನತಿಗೊಂಡು ತನ್ನ ಜಾತಿ, ಹಣ,ರಾಜಕೀಯ ಪ್ರಭಾವದಿಂದ 1/6/2011ರಿಂದಲೂ ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕರಾಗಿ ಅಕ್ರಮ ಅವ್ಯವಹಾರ ನಡೆಸಿ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿದರು.
ತನ್ನ ಅಕ್ರಮ, ಅವ್ಯವಹಾರಗಳಿಗೆ ಸಹಕರಿಸದ ದಿನಗೂಲಿ ನೌಕರರನ್ನು ಕೆಲಸದಿಂದ ತೆಗೆದುಹಾಕಿ ಕಛೇರಿ ಸಿಬ್ಬಂದಿಗಳಿಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅವರನ್ನು ಈ ಕೂಡಲೇ ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿದರು. ಅವರ ಅವಧಿಯಲ್ಲಿ ನಡೆದಿರುವ ಎಲ್ಲಾ ಅಕ್ರಮ ಅವ್ಯವಹಾರಗಳನ್ನು ತನಿಖೆಗೆ ಒಳಪಡಿಸಿ ಸರ್ಕಾರಕ್ಕೆ ಆಗಿರುವ ನಷ್ಟವನ್ನು ವಸೂಲಿ ಮಾಡಿ. ಅಕ್ರಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಿ, ಉನ್ನತ ಮಟ್ಟದ ತನಿಖೆ ನಡೆಯಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆ.ವಿ.ದೇವೇಂದ್ರ, ಕಿರಂಗೂರು ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: