ಮೈಸೂರು

ಕರುಣಾಮಯಿ ವಿಷ್ಣು ಅಭಿಮಾನಿ ಬಳಗ,ಪಾತಿ ಫೌಂಡೇಶನ್ ವತಿಯಿಂದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಜನ್ಮದಿನ ಪ್ರಯುಕ್ತ ‘ಸಿಂಹದ ನೆನಪು’ ಕಾರ್ಯಕ್ರಮ

ಮೈಸೂರು,ಸೆ.18:- ಕರುಣಾಮಯಿ ವಿಷ್ಣು ಅಭಿಮಾನಿ ಬಳಗ ಹಾಗೂ ಪಾತಿ ಫೌಂಡೇಶನ್ ವತಿಯಿಂದ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ 70ನೇ ವರ್ಷದ ಜನ್ಮದಿನಾಚರಣೆ ಪ್ರಯುಕ್ತ ‘ಸಿಂಹದ ನೆನಪು’ ಕಾರ್ಯಕ್ರಮವನ್ನು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿರುವ ಸಾಹಸ ಸಿಂಹ ವಿಷ್ಣುವರ್ಧನ್ ಉದ್ಯಾನವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ, ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ವಿತರಿಸಿ ಕೊರೋನಾ ಜಾಗೃತಿ ಮಾಡಿಸುವ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮವನ್ನು ಮೇಯರ್ ತಸ್ನೀಂ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿಷ್ಣುವರ್ಧನ್ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವುದು ಬಹಳ ಸಂತೋಷಕರ. ಮುಂದಿನ ನಗರ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿರುವ ಸಾಹಸಸಿಂಹ ವಿಷ್ಣುವರ್ಧನ್ ಉದ್ಯಾನವನಕ್ಕೆ ಅಧಿಕೃತವಾಗಿ ನಗರಪಾಲಿಕೆಯಿಂದ ಹೆಸರು ಇಡಲು ಪ್ರಸ್ತಾಪಿಸುತ್ತೇನೆ. ಹಾಗೆಯೇ ಪ್ರತಿಮೆ ಸ್ಥಾಪನೆ ಮಾಡಲು ಸಹ ಪ್ರಸ್ತಾಪಿಸಿ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳ ಮನವಿಗೆ ಸ್ಪಂದಿಸಿ ಅತಿ ಶೀಘ್ರದಲ್ಲೇ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.
ಸಮಾಜ ಸೇವಕ, ಕಲಾಪೋಷಕ ಡಾ. ಕೆ ರಘುರಾಮ್ ವಾಜಪೇಯಿ ಮಾತನಾಡಿ ಸಾಹಸಸಿಂಹ ವಿಷ್ಣುವರ್ಧನ್ ಮೂಲತಃ ಮೈಸೂರಿನವರಾದರೂ ಕೂಡ ವಿಶ್ವದೆಲ್ಲಡೆ ಜನಪ್ರಿಯರಾಗಿದ್ದಾರೆ. ಅವರ ಪ್ರತಿಯೊಂದು ಚಿತ್ರಗಳು ಸಹ ಕುಟುಂಬ ಪ್ರಧಾನವಾಗಿತ್ತು. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಜೊತೆಯಲ್ಲೇ ಚಿತ್ರರಂಗದಲ್ಲಿ ಹೊಸ ಆಯಾಮ ಸೃಷ್ಟಿಸುವಲ್ಲಿ ಕಲಾವಿದರಿಗೆ ಮಾದರಿಯಾಗಿತ್ತು, ಕನ್ನಡ ನೆಲ ಜಲ ಭಾಷೆಯ ವಿಚಾರಕ್ಕೆ ಧಕ್ಕೆ ಬಂದಾಗ ಧ್ವನಿ ಎತ್ತುತ್ತಿದ್ದ ಮಹಾನ್ ವ್ಯಕ್ತಿ ಡಾ. ವಿಷ್ಣುವರ್ಧನ, ಚಿತ್ರನಗರಿ ಮೈಸೂರಿನಲ್ಲಿ ಸ್ಥಾಪನೆಯ ಪರಿಕಲ್ಪನೆ ನೀಡಿದ್ದೇ ಅವರು. ಚಿತ್ರ ಬ್ರಹ್ಮ ಪುಟ್ಟಣ್ಣ ಕಣಗಾಲ್ ರವರ ಗರಡಿಯ ಶಿಷ್ಯನಾಗಿ ಗುರುತಿಸಿಕೊಂಡ ಅವರು ಎಷ್ಟೇ ಉನ್ನತಸ್ಥಾನಕ್ಕೇರಿದರೂ ನಡೆಸುತ್ತಿದ್ದ ಸರಳಜೀವನ ಪ್ರತಿಯೊಬ್ಬರಿಗೂ ಮಾದರಿ. ಇಂತಹ ಅತ್ಯುತ್ತಮ ಕನ್ನಡ ನಟನ ಜಯಂತಿಯನ್ನು ರಾಜ್ಯಸರ್ಕಾರ ಕನ್ನಡ ಸಂಸ್ಕೃತಿ ಇಲಾಖೆ ಆಚರಿಸಿ ಯುವ ಕಲಾವಿದರ ಪ್ರತಿಭೆಯನ್ನು ಪ್ರೋತ್ಸಾಹಿಸಿ ಮುಖ್ಯವಾಹಿನಿಗೆ ತರಬೇಕು ಎಂದರು.
ಕಾರ್ಯಕ್ರಮದಲ್ಲಿ ಇಳೈಆಳ್ವಾರ್ ಸ್ವಾಮೀಜಿ ,ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್ ,ಪಾತಿ ಫೌಂಡೇಶನ್ ಅಧ್ಯಕ್ಷರಾದ ಎಂಡಿ ಪಾರ್ಥ ಸಾರಥಿ ,ಯುವ ಮುಖಂಡರಾದ ಎಂ ಎನ್ ನವೀನ್ ಕುಮಾರ್ ,ಉದ್ಯಮಿ ಉಮೇಶ್ ಶರ್ಮ ,ವಿಕ್ರಂ ಅಯ್ಯಂಗಾರ್, ವಿನಯ್ ಕಣಗಾಲ್ ,ಅಜಯ್ ಶಾಸ್ತ್ರಿ,ನೀಲಕಂಠ ,ಕಡಕೊಳ ಜಗದೀಶ್ ,ಜಯಸಿಂಹ, ಚಕ್ರಪಾಣಿ, ಪ್ರಶಾಂತ್ ಭಾರದ್ವಾಜ್, ಮಧು ಎನ್ ,ಹರೀಶ್ ನಾಯ್ಡು ,ಶ್ರೀನಿವಾಸ್ , ಮುಬಾರಕ್ ,ಮಹೇಶ್, ಮಂಜು, ಬಸವರಾಜು ,ಮದನ್ ಕುಮಾರ್, ಸಂತೋಷ್ ,ಮಹದೇವ್ ,ಉಮೇಶ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: