ಮೈಸೂರು

ಮನೆಯ ಮುಂದೆ ನಿಲ್ಲಿಸಿದ್ದ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮೈಸೂರು. ಸೆ.18:- ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ವಾಹನ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಭಾರತ್ ನಗರದಲ್ಲಿ ನಡೆದಿದೆ.
ಯುಜಿಡಿ ವರ್ಕರ್ ಶಿವು ಎಂಬವರು ಮನೆಯ ಮುಂದೆ ದ್ವಿಚಕ್ರ ವಾಹನವನ್ನು ನಿಲ್ಲಿಸಿದ್ದರು. ನಿನ್ನೆ ರಾತ್ರಿ ಯಾರೋ ದುಷ್ಕರ್ಮಿಗಳು ನಿಲ್ಲಿಸಿಟ್ಟ ವಾಹಣ್ಣುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಗಳು ಆಗಮಿಸಿ ಬೆಂಕಿ ಆರಿಸಿದ್ದಾರೆ.
ಬೆಂಕಿ ಹಚ್ಚಲು ಕಾರಣ ತಿಳಿದು ಬಂದಿಲ್ಲ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: