ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಡ್ರಗ್ಸ್ ಪ್ರಕರಣ: ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟಿಸ್

ಬೆಂಗಳೂರು,ಸೆ.18-ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಕುಮಾರ್, ಮಾಜಿ ಕಾರ್ಪೋರೇಟರ್ ಆರ್.ವಿ.ಯುವರಾಜ್ ಗೆ ಸಿಸಿಬಿ ಇಂದು ನೋಟಿಸ್ ನೀಡಿದೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಆರ್.ವಿ.ಯುವರಾಜ್ ಮಾಜಿ ಶಾಸಕ ಆರ್.ವಿ.ದೇವರಾಜ್ ಪುತ್ರ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅಕುಲ್ ಬಾಲಾಜಿ, ಸಿಸಿಬಿ ನೋಟಿಸ್ ಸಿಕ್ಕಿದೆ. ನಾನೀಗ ಹೈದರಾಬಾದ್ ನಲ್ಲಿದ್ದೇನೆ. ನಾಳೆ ಸಿಸಿಬಿ ಕೊಟ್ಟಿರುವ ಸಮಯಕ್ಕೆ ಸರಿಯಾಗಿ ವಿಚಾರಣೆಗೆ ಹಾಜರಾಗುತ್ತೇನೆ ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಮೊನ್ನೆಯಷ್ಟೇ ತಾರಾದಂಪತಿ ದಿಗಂತ್, ಐಂದ್ರಿತಾ ರೇ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮೊದಲ ಸುತ್ತಿನ ವಿಚಾರಣೆ ಎದುರಿಸಿರುವ ಇವರಿಬ್ಬರಿಗೆ ಅಗತ್ಯವಿದ್ದರೆ ಮತ್ತೊಮ್ಮೆ ಸಮನ್ಸ್​ ನೀಡಿ ವಿಚಾರಣೆಗೆ ಕರೆಸಿಕೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಡ್ರಗ್ಸ್​ ಮಾಫಿಯಾದ ಜಾಡು ಹಿಡಿದು ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಹಲವರ ಬೆನ್ನಹಿಂದೆ ಬಿದ್ದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳಾದ ಡ್ರಗ್ಸ್​ ಪೆಡ್ಲರ್​ಗಳು ವಿಚಾರಣೆ ವೇಳೆ ಮಹತ್ತರದ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ. ಈ ಮೇರೆಗೆ ಅಕುಲ್​ ಬಾಲಾಜಿ, ಸಂತೋಷ್​ ಕುಮಾರ್​, ಆರ್.ವಿ.ಯುವರಾಜ್​ ಅವರಿಗೆ ನೋಟಿಸ್ ನೀಡಲಾಗಿದೆ. (ಎಂ.ಎನ್)

Leave a Reply

comments

Related Articles

error: