ಮೈಸೂರು

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : ನಾಲ್ವರ ಬಂಧನ

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಮೈಸೂರು  ಸಿಸಿಬಿ ಮತ್ತು ಕುವೆಂಪುನಗರ ಪೊಲೀಸರು ನಾಲ್ವರನ್ನು ಬಂಧಿಸಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರದ ದಟ್ಟಗಳ್ಳಿ 3ನೇ ಹಂತ, ಕನಕದಾಸನಗರ, ಮನೆನಂ:1170ರ ಮೇಲೆ ದಾಳಿ ಮಾಡಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಲ್ಲೇಶ್, ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹೇಶ್, ಚೇತನ್ , ಹಾಗೂ ಸರಸ್ವತಿಬಾಯಿ, ಎಂಬುವರನ್ನು ಬಂಧಿಸಿ ವೇಶ್ಯಾವಾಟಿಕೆಗೆ ಬಳಕೆಯಾಗಿದ್ದ 72,700 ರೂ. ನಗದು, 6 ಮೊಬೈಲ್ ಪೋನ್‍ಗಳು ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.

ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: