ಕರ್ನಾಟಕಪ್ರಮುಖ ಸುದ್ದಿ

ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣಗೆ ಕೋವಿಡ್ ಪಾಸಿಟಿವ್

ಬೆಂಗಳೂರು,ಸೆ.19-ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಅವರೇ ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದಾರೆ. ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಸೋಂಕು ತಗುಲಿರುವುದರಿಂದ ಅಶ್ವತ್ಥ ನಾರಾಯಣ ಅವರು ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿಲ್ಲ. (ಎಂ.ಎನ್)

Leave a Reply

comments

Related Articles

error: