ಮೈಸೂರು

ಸರ್ಕಾರಿ ಯಂತ್ರ ದುರುಪಯೋಗ: ಬಿಜೆಪಿಯಿಂದ ರಾಜ್ಯ ಚುನಾವಣಾಧಿಕಾರಿಗೆ ದೂರು

ಉಪಚುನಾವಣೆಯಲ್ಲಿ ಸರ್ಕಾರೀ ಯಂತ್ರ ದುರುಪಯೋಗ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಚುನಾವಣಾಧಿಕಾರಿಗೆ ದೂರು ನೀಡಿದೆ.
ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗ ಕಚೇರಿಯಲ್ಲಿ ಶಾಸಕ ವಿಜಯ ಕುಮಾರ್ ನೇತೃತ್ವದ ನಿಯೋಗದಿಂದ ದೂರು ಸಲ್ಲಿಕೆಯಾಗಿದೆ.
ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಮಾತನಾಡಿದ ಬಿಜೆಪಿ ಶಾಸಕ ವಿಜಯ್ ಕುಮಾರ್ ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಅಕ್ರಮ ನಡೆಯುತ್ತಿದೆ. ಪೊಲೀಸ್ ಅಧಿಕಾರಿಗಳು ಹಾಗು ರೆವಿನ್ಯೂ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ.ನಮ್ಮ ನಾಯಕರಾದ ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ವಾಹನ ಕೂಡ ಪರಿಶೀಲಿಸಿದ್ದಾರೆ.ಆದರೆ ರಾಜ್ಯ ಸರ್ಕಾರಿ ವಾಹನಗಳನ್ನು ಅಧಿಕಾರಿಗಳು ಪರಿಶೀಲನೆ ಮಾಡುತ್ತಿಲ್ಲ.ಸರ್ಕಾರಿ ವಾಹನದಲ್ಲಿ ಅಕ್ರಮವಾಗಿ ಹಣ ಸಾಗಿಸಲಾಗುತ್ತಿದೆ.ಕೂಡಲೇ ರಾಜ್ಯ ಸರ್ಕಾರಿದಿಂದ ನೇಮಕವಾಗಿರುವ ಅಧಿಕಾರಿಗಳನ್ನು ತಕ್ಷಣ ಬದಲಾಯಿಸಬೇಕು.ಪಾರದರ್ಶಕವಾಗಿ ಉಪಚುನಾವಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದೇವೆ. ಚುನಾವಣೆಗೆ ಇನ್ನು ಮೂರ್ನಾಲ್ಕು ದಿನ ಮಾತ್ರ ಇದೆ.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಕ್ರಮ ಮಾಡೋದು ಜಾಸ್ತಿಯಾಗಲಿದ್ದು,ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದೇವೆ ಎಂದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: