ಮೈಸೂರು

ಇಂದಿನಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಆರಂಭ

ಮೈಸೂರು,ಸೆ.21:- ಇಂದಿನಿಂದ ಅಂದರೆ ಸೆಪ್ಟೆಂಬರ್ 21 ರಿಂದ 28 ರವರೆಗೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯ ಪ್ರದೇಶದವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಈಗಾಗಲೇ ಆದೇಶ ಹೊರಡಿಸಿರುತ್ತಾರೆ.
ಪರೀಕ್ಷೆಗಳು ಪ್ರಾರಂಭವಾಗುವ ಅರ್ಧ ಗಂಟೆ ಮುಂಚಿತವಾಗಿ ಮತ್ತು ಪರೀಕ್ಷಾ ಅವಧಿ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆಯೂ ಆದೇಶ ಹೊರಡಿಸಿದ್ದಾರೆ.
ಇಂದು ಕೂಡ ಕೋವಿಡ್-19 ಮಾರ್ಸೂಚಿಯನ್ನು ಪಾಲಿಸಿಯೇ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದೊಳಗಡೆ ಬಿಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ಸೆಕ್ಷನ್ ಜಾರಿಯಿದ್ದು ಪೊಲೀಸ್ ಕಾವಲಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: