ಮೈಸೂರು

ಕೃಷ್ಣರಾಜ ವಿಧಾನಸಭಾ ಕ್ಷೇತ್ರ ದಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು,ಸೆ.21:- ಕೆಪಿಸಿಸಿ ವಿನೂತನ ಕಾರ್ಯಕ್ರಮ ಆರೋಗ್ಯ ಹಸ್ತವನ್ನು ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ಅವರ ನೇತೃತ್ವದಲ್ಲಿ ಮಧುವನ ಬಡಾವಣೆಯಲ್ಲಿಂದು ಹಮ್ಮಿಕೊಳ್ಳಲಾಗಿತ್ತು.
ಆರೋಗ್ಯ ಹಸ್ತ ಕಾರ್ಯಕ್ರಮದ ರಾಜ್ಯಾಧ್ಯಕ್ಷರಾದ ಮಾಜಿ ಸಂಸದ ಆರ್ ಧೃವನಾರಾಯಣ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಅಲ್ಲಿನ ನಿವಾಸಿಗಳ ಆರೋಗ್ಯವನ್ನು ತಪಾಸಣೆ ಮಾಡಲಾಯಿತು. ನಗರ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಮೂರ್ತಿ, ಅರಗು ಮತ್ತು ಬಣ್ಣದ ಕಾರ್ಖಾನೆ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ವಕ್ತಾರ ಹೆಚ್ ಎ ವೆಂಕಟೇಶ್ ,ಕೆ ಆರ್ ಬ್ಲಾಕ್ ಅಧ್ಯಕ್ಷರಾದ ಜಿ ಸೋಮಶೇಖರ್ ,ಕೆಪಿಸಿಸಿ ಸದಸ್ಯ ಶ್ರೀನಾಥ್ ಬಾಬು,ಕಾಳಿಂಗು,ಡೈರಿವೆಂಕಟೇಶ್,ರಮೇಶ್,ಗುಣಶೇಖರ್ ,ಯೋಗೇಶ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: