ಮೈಸೂರು

ಮ್ಯಾನ್ ಹೋಲ್ ದುರಸ್ಥಿಗೆ ಸ್ಥಳೀಯರ ಒತ್ತಾಯ

ಮೈಸೂರು,ಸೆ.21:- ಮೈಸೂರಿನ ಹುಣಸೂರು ರಸ್ತೆಯ ಪ್ರೀಮಿಯರ್ ಸ್ಟುಡಿಯೋ ಸಿಗ್ನಲ್ ಬಳಿ ಇರುವ ಮ್ಯಾನ್ ಹೋಲ್ ಭಾರೀ ಮಳೆಗೂ ಮುನ್ನವೇ ತುಂಬಿ ಹರಿಯುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಸ್ಥಳದಲ್ಲಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಣಸೂರು ರಸ್ತೆಯ ಪ್ರೀಮಿಯರ್ ಸ್ಟುಡಿಯೋ ಸಿಗ್ನಲ್ ಬಳಿಯಿರುವ ಮ್ಯಾನ್ ಹೋಲ್ ತುಂಬಿ ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿದ್ದು, ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ಕಳೆದ ಒಂದು ತಿಂಗಳಿನಿಂದಲೂ ಕೊಳಚೆ ನೀರು ರಸ್ತೆಗೆ ಹರಿಯುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಮಾತ್ರ ಇತ್ತ ಕಡೆ ಗಮನ ಹರಿಸಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪಾದಾಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಪಾಲಿಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: