ಮೈಸೂರು

ಏ.10 : ಶ್ರಮ ಸಂಸ್ಕೃತಿ ಶಿಬಿರ

ಅನ್ನದಾತರ ನೋವು ನಲಿವಿನ ಸಮ್ಮಿಳಿತವನ್ನು ರಂಗ ಚಟುವಟಿಕೆಗಳ ಮೂಲಕ ತೆರೆದಿಡುವ ಮತ್ತು ಕೃಷಿಯನ್ನು ಪ್ರೋತ್ಸಾಹಿಸುವ ಆಶಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಶ್ರಮ ಸಂಸ್ಕೃತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ ತಿಳಿಸಿದರು.

ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿಎಂಶ್ರೀ ಹಾಲ್‍ನಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೈತರಿಗೆ ಕೃಷಿಯ ಮೇಲಿನ ತುಡಿತವನ್ನು ಹೆಚ್ಚಿಸುವ ದೃಷ್ಟಿಯಿಂದ ಒಂದು ತಿಂಗಳ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಏ.10ಕ್ಕೆ ಶಿಬಿರ  ಬಿ.ಎಂ.ಶ್ರೀ ಸಭಾಂಗಣದಲ್ಲಿ ಆರಂಭವಾಗಲಿದ್ದು, ನಾಟಕೋತ್ಸವ, ಬೀದಿ ನಾಟಕ, ರೈತರ ಸಂತೆ, ಒಕ್ಕಲು ಗೀತೆ , ಕೃಷಿಪರಕರ, ಚಿತ್ರಕಲಾ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೆ.ಆರ್.ಗೋಪಾಲಕೃಷ್ಣ , ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಜಾನಪದ ವಿಭಾಗದ ಮುಖ್ಯಸ್ಥ ಡಾ.ಎಂ.ನಂಜಯ್ಯ ಹೊಂಗನೂರು ಮತ್ತಿತರರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: