ಕರ್ನಾಟಕನಮ್ಮೂರುಪ್ರಮುಖ ಸುದ್ದಿಮೈಸೂರು

ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧ

ಚಾಮುಂಡೀ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ಪ್ರತಿದಿನವೂ ಸಹಸ್ರಾರು ಭಕ್ತರು ಬರುತ್ತಲೇ ಇರುತ್ತಾರೆ. ದಸರಾ ಸಂದರ್ಭದಲ್ಲಂತೂ ದೇವಳಕ್ಕೆ ಭೇಟಿ ನೀಡುವವರ ಸಂಖ್ಯೆ ಅಧಿಕವಾಗಿದ್ದು ವಾಹನ ನಿಲುಗಡೆಗೆ ಸ್ಥಳಾವಕಾಶದ ಕೊರತೆ ಕಂಡುಬರುತ್ತದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 1ರಿಂದ 16ರವರೆಗೆ ಪ್ರತಿದಿನ ಬೆಳಿಗ್ಗೆ 6ಗಂಟೆಯಿಂದ ರಾತ್ರಿ 8.30ರವರೆಗೆ ಖಾಸಗಿ ವಾಹನಗಳನ್ನು ಚಾಮುಂಡಿ ಬೆಟ್ಟದ ತಾವರೆಕಟ್ಟೆ ಬಳಿಯಿಂದ ಚಾಮುಂಡಿಬೆಟ್ಟಕ್ಕೆ ಸಂಚರಿಸುವುದನ್ನು ನಿರ್ಬಂಧಿಸಲಾಗಿದೆ.

ಸಾರ್ವಜನಿಕರಿಗೆ ಲಲಿತಮಹಲ್ ಹೆಲಿಪ್ಯಾಡ್ ಬಳಿಯಿಂದ ಚಾಮುಂಡಿಬೆಟ್ಟಕ್ಕೆ ಉಚಿತ ಸಾರಿಗೆ ಬಸ್ಸುಗಳ ಸೇವೆಯನ್ನು ಜಿಲ್ಲಾಡಳಿತ ವ್ಯವಸ್ಥೆಗೊಳಿಸಿದ್ದು, ಸಾರ್ವಜನಿಕರು ಬರುವ ವಾಹನಗಳಿಗೆ ಲಲಿತಮಹಲ್ ಹೆಲಿಪ್ಯಾಡ್ ಬಳಿ ಇರುವ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಅವರ ವಾಹನಗಳನ್ನು ಇಲ್ಲಿಯೇ ನಿಲ್ಲಿಸಿ ಜಿಲ್ಲಾಡಳಿತದ ವತಿಯಿಂದ ವ್ಯವಸ್ಥೆಗೊಳಿಸಿರುವ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಸಂಚರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಜಿಲ್ಲಾಡಳಿತ ತಿಳಿಸಿದೆ.

Leave a Reply

comments

Related Articles

error: