ಪ್ರಮುಖ ಸುದ್ದಿ

ರಾಜ್ಯದಲ್ಲಿ ಮುಂದುವರಿದ ಕೊರೋನಾ ವೈರಸ್ : 6,974 ಮಂದಿಗೆ ಪಾಸಿಟಿವ್ ದೃಢ

ರಾಜ್ಯ( ಬೆಂಗಳೂರು)ಸೆ.23:- ರಾಜ್ಯದಲ್ಲಿ ಕೊರೋನಾ ವೈರಸ್ ಮುಂದುವರಿದಿದ್ದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. 9,073 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 26 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 83 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,082 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,00,728ಕ್ಕೆ ಏರಿಕೆಯಾಗಿದೆ.

9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,32,450ಕ್ಕೆ ಏರಿಕೆಯಾಗಿದೆ. 93,153 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: