ಮೈಸೂರು

ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶ್ರೀರಾಮುಲು ಭೇಟಿ

ಶ್ರೀರಾಮನವಮಿ ಪ್ರಯುಕ್ತ ಮೈಸೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯಿತು. ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಸಂಸದ ಶ್ರೀರಾಮುಲು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು ನಾನು ಪ್ರತಿವರ್ಷ ಊರಲ್ಲಿ ಆಚರಿಸುತ್ತಿದ್ದೆ. ಈ ಬಾರಿ ಗುಂಡ್ಲುಪೇಟೆ, ನಂಜನಗೂಡು ಚುನಾವಣೆಯ ನಿಮಿತ್ತ ಇಲ್ಲಿಗೆ ಆಗಮಿಸಿದ್ದೆ. ಅದರಿಂದ ಕೋಟೆ ಆಂಜನೇಯ ಸ್ವಾಮಿ ದರ್ಶನ ಪಡೆಯುವಂತಾಯಿತು ಎಂದರು. ಈ ಸಂದರ್ಭ ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ, ಕೋಸಂಬರಿಗಳನ್ನು ವಿತರಿಸಲಾಯಿತು. ಹಲವು ದೇವಾಲಯಗಳಲ್ಲಿ ಅರ್ಚನೆ ನಡೆಯಿತು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: