ದೇಶಪ್ರಮುಖ ಸುದ್ದಿ

ಭದ್ರತಾಪಡೆಯಿಂದ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ

ಜಮ್ಮು,ಸೆ.24-ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಿ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.

ಅವಂತಿಪೋರಾದ ತ್ರಾಲ್ ನಲ್ಲಿರುವ ಮಗಾಮ ಎಂಬ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾಪಡೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

ಈ ನಡುವೆ ಪುಲ್ವಾಮಾದಲ್ಲಿ ಸೇನಾಪಡೆಗಳು ಎನ್ ಕೌಂಟರ್ ನಡೆಸಿದ್ದು, ಉಗ್ರನೋರ್ವನನ್ನು ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: