ಮೈಸೂರು

ಸಚಿವ ಸುರೇಶ್ ಅಂಗಡಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಣೆ

ಮೈಸೂರು. ಸೆ.24:- ಕೇಂದ್ರ ಸರ್ಕಾರದ ರೈಲ್ವೆ ಖಾತೆ ರಾಜ್ಯ ಸಚಿವರು ಹಾಗೂ ಉತ್ತರ ಕರ್ನಾಟಕದ ಪ್ರಭಾವಿ ಬಿಜೆಪಿ ಮುಖಂಡರಾದ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸುವ ಸಲುವಾಗಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ಸಚಿವರ ಭಾವಚಿತ್ರ ಕ್ಕೆ ಪುಷ್ಪ ನಮನ ಸಲ್ಲಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನ ಆಚರಿಸಲಾಯಿತು.
ಈ ಸಂದರ್ಭ ಕ್ಷೇತ್ರದ ಅಧ್ಯಕ್ಷರಾದ ವಡಿವೇಲು ಎಂ, ಪ್ರಧಾನ ಕಾರ್ಯದರ್ಶಿಗಳಾದ ನಾಗೇಂದ್ರ ಕುಮಾರ್ ಜೆ, ಹಿರಿಯ ಮುಖಂಡರಾದ ಮೈ ಪೂ ರಾಜೇಶ್, ಕೃಷ್ಣ, ಉಪಾಧ್ಯಕ್ಷರುಗಳಾದ ಬಾಲಕೃಷ್ಣ, ರವಿ, ವಿನಯ್, ಶ್ರೀನಿವಾಸ್ ಕಾರ್ಯದರ್ಶಿಗಳಾದ ಕೃಷ್ಣ, ಪ್ರಸಾದ್ ಬಾಬು, ನಗರ ಪಾಲಿಕಾ ಸದಸ್ಯರಾದ ಶಾರದಮ್ಮ ಈಶ್ವರ್, ವಾರ್ಡ್ ಉಸ್ತುವಾರಿಗಳಾದ ದೇವರಾಜ ಗೌಡ್ರು, ಮಧು, ಶಿವಪ್ಪ, ಅರುಣ್ ಹಾಗೂ ಸುರೇಶ್ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: