ಕರ್ನಾಟಕಪ್ರಮುಖ ಸುದ್ದಿ

ಕೊರೊನಾ ಸೋಂಕಿಗೆ ಶಾಸಕ ಬಿ.ನಾರಾಯಣರಾವ್ ಬಲಿ

ಬೆಂಗಳೂರು,ಸೆ.24-ಕೊರೊನಾ ಸೋಂಕಿಗೆ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್​ ಶಾಸಕ ಬಿ.ನಾರಾಯಣರಾವ್​ (65) ಬಲಿಯಾಗಿದ್ದಾರೆ.

ಕೊರೊನಾ ಸೋಂಕಿಗೆ ಒಳಗಾಗಿದ್ದ ನಾರಾಯಣರಾವ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಶ್ವಾಸಕೋಶಕ್ಕೆ ಸೋಂಕು, ನ್ಯೂಮೋನಿಯಾ, ಅಧಿಕ ರಕ್ತದೊತ್ತಡ ಹಾಗೂ ಶುಗರ್ ನಿಂದಾಗಿ ಆರಂಭದಲ್ಲಿಯೇ ಅವರ ಆರೋಗ್ಯ ಬಿಗಡಾಯಿಸಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾದ ಎರಡನೇ ದಿನವೇ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿತ್ತು. ಮಂಗಳವಾರ ರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. (ಎಂ.ಎನ್)

 

Leave a Reply

comments

Related Articles

error: