ಮೈಸೂರು

ಗೂಡ್ಸ್ ಶೆಡ್ ಗೆ ಸಚಿವ ತನ್ವೀರ್ ಸೇಠ್ ಭೇಟಿ

ಮೂರನೇ ವ್ಯಕ್ತಿ ವಿಮೆ(ಥರ್ಡ್ ಪಾರ್ಟಿ ಇನ್ಸುರೆನ್ಸ್) ಪ್ರೀಮಿಯಮ್ ದರ ದುಪ್ಪಟ್ಟು , 15 ವರ್ಷಗಳ ಹಳೆಯ ವಾಹನಗಳನ್ನು ಸ್ಥಗಿತಗೊಳಿಸುವುದು, ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ವಿಧಿಸಲು ಮುಂದಾಗಿರುವ ಕ್ರಮ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಧೋರಣೆಗಳನ್ನು ಖಂಡಿಸಿ, ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಚಾಲಕ ಮಾಲಕರು ನಡೆಸುತ್ತಿರುವ ಮುಷ್ಕರ ಆರನೇ ದಿನಕ್ಕೆ ಕಾಲಿಟ್ಟಿದ್ದು, ಕರ್ನಾಟಕ ಪ್ರಾತಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಮೈಸೂರಿನ ಯಾದವಗಿರಿ ಬಳಿ ಇರುವ ಗೂಡ್ಸ್ ಶೆಡ್ ಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.

ಲಾರಿ ಮಾಲಕರ ಸಂಘದ ಮಾಜಿ ಅಧ್ಯಕ್ಷ ಕೋದಂಡರಾಮ ಮಾತನಾಡಿ ವಿಮಾ ಪ್ರೀಮಿಯಮ್ ದರ ಏರಿಕೆ ಮಾಡಿರುವುದು, ರಾಜ್ಯ ಹೆದ್ದಾರಿಗಳಿಗೆ ಟೋಲ್ ವಿಧಿಸಿರುವುದು ಸೇರಿದಂತೆ ಅನೇಕ ಕ್ರಮಗಳನ್ನು ಹಿಂದಕ್ಕೆ ಪಡೆಯಬೇಕೆಂದು ಹಲವು ಬೇಡಿಕೆಗಳನ್ನು ಸಲ್ಲಿಸಿದ್ದೆವು. ಆದರೆ ಈವರೆಗೂ ಈಡೇರಿಲ್ಲ. ಈಡೇರುವವರೆಗೂ ಹೋರಾಟ ನಡೆಸುತ್ತೇವೆ ಎಂದರು. ಬಳಿಕ ಸಚಿವರು ನಿಮ್ಮ ಎಲ್ಲ ಸಮಸ್ಯೆಗಳನ್ನು ಆಲಿಸಿದ್ದೇನೆ. ಈ ಕುರಿತು ಸರ್ಕಾರದ ಜೊತೆ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದರು. (ಕೆ.ಎಸ್-ಎಸ್-ಎಚ್)

Leave a Reply

comments

Related Articles

Check Also

Close
error: