ಪ್ರಮುಖ ಸುದ್ದಿಮನರಂಜನೆ

ಡ್ರಗ್ಸ್ ಪ್ರಕರಣ : ವಿಚಾರಣೆಗೆ ಹಾಜರಾಗುವುದಾಗಿ ನಟಿ, ನಿರೂಪಕಿ ಅನುಶ್ರೀ ಸ್ಪಷ್ಟನೆ

ರಾಜ್ಯ( ಬೆಂಗಳೂರು)ಸೆ.25:- ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್ ಬಗ್ಗೆ ನಟಿ, ಜನಪ್ರಿಯ ನಿರೂಪಕಿ ಅನುಶ್ರೀ ಸ್ಪಷ್ಟಪಡಿಸಿದ್ದು ಇಂದು ಸಿಸಿಬಿ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ವಿಚಾರಣೆಗೆ ಹಾಜರಾಗಲು ಮಂಗಳೂರಿನ ಸಿಸಿಬಿ ಕಚೇರಿಯಿಂದ ನೋಟಿಸ್ ಜಾರಿಯಾಗಿದ್ದು, ಶುಕ್ರವಾರ ಬೆಳಗ್ಗೆ 11 ಗಂಟೆಗೆ ನಾನು ಸ್ವತ: ಮಂಗಳೂರಿಗೆ ತೆರಳಿ ವಿಚಾರಣೆಗೆ ಖುದ್ದಾಗಿ ಹಾಜರಾಗುವುದಾಗಿ ಅನುಶ್ರೀ ತಿಳಿಸಿದ್ದಾರೆ.

ಇದು ಬರೀ ವಿಚಾರಣೆಯ ಸೂಚನೆಯಾಗಿದ್ದು, ಮಾಧ್ಯಮಗಳಲ್ಲಿ ನಾನು ನಟಿಸಿದ ಚಿತ್ರವೊಂದನ್ನು ಬಳಸಿ ಅಪರಾಧಿ ಎಂಬಂತೆ ತೋರಿಸುವ ಪ್ರಯತ್ನಗಳು ನಡೆಯುತ್ತಿವೆ. ಡ್ರಗ್ಸ್ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ, ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: