ಮೈಸೂರು

ಕಾರ್ಮಿಕ ಕಾನೂನುಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ಮೈಸೂರು,ಸೆ.25:-ಕಾರ್ಮಿಕ ಕಾನೂನುಗಳ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಮೈಸೂರು ಜಿಲ್ಲಾಧಿಕಾರಿಗಳ ಕಛೇರಿ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಕೇಂದ್ರ ಸರ್ಕಾರವು ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತರುತ್ತಿದೆ. ಅದಕ್ಕಾಗಿ ಕೇಂದ್ರ ಸರ್ಕಾರ ರಾಜ್ಯ ಸಭೆಯಲ್ಲಿ ಕಾರ್ಮಿಕ ಕಾನೂನು ತಿದ್ದುಪಡಿ ಮಸೂದೆಯನ್ನು ಮಂಡಿಸಿ ಅನುಮೋದನೆ ಪಡೆದುಕೊಂಡಿದೆ. ಯಾವುದೇ ಚರ್ಚೆ ಇಲ್ಲದೆ ಅಂಗೀಕಾರವಾಗಿರುವುದನ್ನು ದೇಶದ ಕಾರ್ಮಿಕ ಸಮುದಾಯ ಮತ್ತು ಸಮಸ್ತ ಕಾರ್ಮಿಕ ಸಂಗಟನೆ ವಿರೋಧಿಸುತ್ತದೆ. ಈ ಮಸೂದೆ ಜಾರಿಯಾಗುವುದರಿಂದ ಕಾರ್ಮಿಕರ ಹಕ್ಕುಗಳು ಮೊಟಕುಗೊಳ್ಳುತ್ತದೆ. ಈ ಮಸೂದೆಯಿಂದ ಕಾರ್ಖಾನೆಯ ಮಾಲೀಕರಿಗೆ, ಆಡಳಿತ ವರ್ಗಕ್ಕೆ ಶೋಷಣೆ ಮಾಡಲು ಅವಕಾಶ ಮಾಡಿಕೊಡುತ್ತದೆ ಎಂದರು.
ಇದು ಕಾರ್ಮಿಕ ಸ್ನೇಹಿ ಅಲ್ಲ, ಬಂಡವಾಳಶಾಹಿಗಳನ್ನು ಓಲೈಸುತ್ತದೆ.ಇದು ಕಾರ್ಮಿಕರ ವಿರೋಧಿ ಕಾನೂನು. ಇದರಿಂದ ಕಾರ್ಮಿಕರ ಬದುಕು ಅತಂತ್ರವಾಗಲಿದೆ. ಈ ಮಸೂದೆಯನ್ನು ಕೈಬಿಡುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಹೆಚ್.ಆರ್.ಶೇಷಾದ್ರಿ, ಬಾಲಾಜಿರಾವ್, ಅರುಣ್ ಕುಮಾರ್, ಚಂದ್ರಶೇಖರ್ ಮೇಟಿ ಮತ್ತಿತರರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: