ಮೈಸೂರು

ವಾಹನದ ಇನ್ಶೂರೆನ್ಸ್ ಹೆಚ್ಚಳ ವಿರೋಧಿಸಿ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಇನ್ಶೂರೆನ್ಸ್ ನಲ್ಲಿ ಹೆಚ್ಚಳ, ಗ್ಯಾಸ್ ಬೆಲೆ ಏರಿಕೆಗಳನ್ನು ಖಂಡಿಸಿ ಮೈಸೂರು ಜಿಲ್ಲೆ ಲಕ್ಷುರಿ ಟ್ಯಾಕ್ಸಿ ಸ್ಟ್ಯಾಂಡ್ ಮಾಲಿಕರು ಮತ್ತು ಚಾಲಕರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ದರ ಹಾಗೂ ಡೀಸೆಲ್ ದರಗಳಲ್ಲಿ ಏರಿಕೆಯಾಗುತ್ತಿದೆ. ಡೀಸೆಲ್ ಮತ್ತು ಪೆಟ್ರೋಲ್ ದರ ಇಳಿಕೆ ಮಾಡಿ, ವಾಹನದ ಇನ್ಶೂರೆನ್ಸ್ ಹೆಚ್ಚಿಸಬೇಡಿ ಎಂದು ಒತ್ತಾಯಿಸಿದರು. ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಂಘದ ಕಚೇರಿಯಿಂದ ಹೊರಟ ಮೆರವಣಿಗೆ ಇರ್ವಿನ್ ರಸ್ತೆ, ರೈಲ್ವೆ ಸ್ಟೇಶನ್ ಮುಂಭಾಗ, ಮೆಟ್ರೋಪೋಲ್ ವೃತ್ತ ಮೂಲಕ ಸಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದಿತು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಅಯೂಬ್ ಪಾಷಾ, ಉಪಾಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಉಮೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: