ಮೈಸೂರು

ಅಮಾಯಕ ಯುವಕನ ಮೇಲಿನ ಹಲ್ಲೆಗೆ ಖಂಡನೆ: ಪ್ರತಿಭಟನೆ

ಮಂಗಳೂರಿನಲ್ಲಿ ನಡೆದ ಅಮಾಯಕ ಯುವಕನ ಮೇಲಿನ ಮಾರಣಾಂತಿಕ ಪೊಲೀಸ್  ದೌರ್ಜನ್ಯ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಮೈಸೂರಿನ ಫೌಂಟೇನ್ ವೃತ್ತದ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಅಮಾಯಕ ಯುವಕ ಅಹ್ಮದ್ ಖುರೇಷ್ ಎಂಬಾತನನ್ನು ಪೊಲೀಸರು ಅಕ್ರಮವಾಗಿ ಬಂಧಿಸಿ ಅವನ ಮೇಲೆ ಮಾರಣಾಂತಿಕ ದೌರ್ಜನ್ಯ ಎಸಗಿದ್ದಾರೆ. ತಪ್ಪಿ ತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಅಧ್ಯಕ್ಷ ಅಮೀನ್ ಸೇಠ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: