ಪ್ರಮುಖ ಸುದ್ದಿಮನರಂಜನೆ

ಪೊಲೀಸರು ಮತ್ತೆ ಕರೆದರೆ ಬರುತ್ತೇನೆ : ಸಿಸಿಬಿ ವಿಚಾರಣೆ ಬಳಿಕ ನಿರೂಪಕಿ ಅನುಶ್ರೀ ಪ್ರತಿಕ್ರಿಯೆ

ರಾಜ್ಯ( ಮಂಗಳೂರು)ಸೆ.26:- ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಖ್ಯಾತ ನಿರೂಪಕಿ, ನಟಿ ಅನುಶ್ರೀ ಅವರ ವಿಚಾರಣೆ ನಡೆಸಿ ಅಗತ್ಯ ಮಾಹಿತಿ ಪಡೆದಿದ್ದಾರೆ.

ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದ ಸಿಸಿಬಿ ತಂಡ ಅನುಶ್ರೀಯನ್ನು ಸತತ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ವಿಚಾರಣೆ ನಂತರ ಸಿಸಿಬಿ ಕಚೇರಿಯಿಂದ ಹೊರಬಂದ ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಅನುಶ್ರೀ, ಬಂಧಿತ ಆರೋಪಿಗಳಾದ ಕಿಶೋರ್ ಶೆಟ್ಟಿ ಹಾಗೂ ತರುಣ್ ರಾಜ್ ಪರಿಚಯವಿದ್ದ ಹಿನ್ನೆಲೆಯಲ್ಲಿ ನನ್ನನ್ನು ವಿಚಾರಣೆಗೆ ಕರೆದಿದ್ದರು ಎಂದು ಹೇಳಿದ್ದಾರೆ.

ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದು, ಮತ್ತೆ ವಿಚಾರಣೆಗೆ ಕರೆದಿಲ್ಲ. ಆದರೆ ಮತ್ತೆ ಕರೆದರೆ ಹಾಜರಾಗುತ್ತೇನೆ. ಡ್ರಗ್ ಮಾಫಿಯಾ ರಾಜ್ಯಕ್ಕೆ ಅಂಟಿರುವ ಭೂತ. ಆ ಭೂತವನ್ನು ಹೋಗಲಾಡಿಸಲು ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ನಾವು ಸಹಕಾರ ನೀಡಬೇಕು ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: