ಪ್ರಮುಖ ಸುದ್ದಿಮೈಸೂರು

ಪ್ರಧಾನಿ ಮೋದಿ, ಸಿಎಂ ಬಿಎಸ್ ವೈ ಅವರಿಂದ ರೈತರಿಗೆ ಅನ್ಯಾಯವಾಗಲ್ಲ; ಸಚಿವ ಎಸ್ ಟಿ .ಸೋಮಶೇಖರ್

ಸರಳ, ಸಾಂಪ್ರದಾಯಿಕ ದಸರಾ ಆಚರಣೆ

ಮೈಸೂರು,ಸೆ.27:- ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

ರೈತರ ಪರ ನಮ್ಮ ಸರ್ಕಾರ ಸದಾ ಇರಲಿದೆ
ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇದೇ 26 ಕ್ಕೆ ಸಭೆ ಕರೆದಿದ್ದೆ. ಆದರೆ ಅಂದು ಅಧಿವೇಶನ ಇದ್ದಿದ್ದರಿಂದ 28ಕ್ಕೆ ಸಭೆ ನಡೆಸಲು ಸೂಚಿಸಿದ್ದೆ. ಆದರೆ ಅಂದು ರೈತರ ಪ್ರತಿಭಟನೆ ಇರುವುದರಿಂದ ಇನ್ನೊಂದು ದಿನಕ್ಕೆ ಮುಂದೂಡಲಾಗಿದೆ. ಅಲ್ಲದೆ ಎಪಿಎಂಸಿ ಹಾಗೂ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾದ ಮೇಲೆಯೇ ಒಪ್ಪಿಗೆ ಪಡೆಯಲಾಗಿದೆ ಎಂದು ಸಹಕಾರ ಸಚಿವರಾದ ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರಸರ್ಕಾರ ರೈತರಿಗೆ ತೊಂದರೆಯಾಗುವ ಯಾವ ಕಾಯ್ದೆಯನ್ನೂ ಮಾಡಿಲ್ಲ. ಒಂದು ವೇಳೆ ರೈತರಿಗೆ ಅನ್ಯಾಯವಾಗುವುದಿದ್ದರೆ ರೈತ ನಾಯಕರಾಗಿರುವ ಮುಖ್ಯಮಂತ್ರಿಗಳಾದ
ಬಿ.ಎಸ್.ಯಡಿಯೂರಪ್ಪ ಅವರೇ ಒಪ್ಪಿಕೊಳ್ಳುತ್ತಿರಲಿಲ್ಲ. ಇಂಥ ಒಳ್ಳೆಯ ಮಸೂದೆಯನ್ನು ನಾನು ಮಂಡಿಸಿದ್ದೇನೆ. ಇದರ ಬಗ್ಗೆ ಸದನದಲ್ಲಿ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಗೆ ವಿಶೇಷ ಅರ್ಥವನ್ನು ಕಲ್ಪಿಸುವುದು ಬೇಡ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.

ಅದ್ದೂರಿ ದಸರಾ ಇಲ್ಲ

ದಸರಾವನ್ನು ಅದ್ದೂರಿಯಾಗಿ ಆಚರಿಸುತ್ತಿಲ್ಲ. ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು 5 ದಿನ ಮುಂಚಿತಬಾಗಿಯೇ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಂಡು ನೆಗೆಟಿವ್ ಇರುವ ವರದಿ ಪ್ರಮಾಣಪತ್ರವನ್ನು ಪಡೆದಿರಬೇಕು ಎಂದು ಸಚಿವರು ಸ್ಪಷ್ಟಪಡಿಸಿದರು.

ಅರಮನೆ ಮೈದಾನ, ಚಾಮುಂಡಿಬೆಟ್ಟದ ಮೇಲಿನ ಕಾರ್ಯಕ್ರಮಗಳಿಗೂ ಸೀಮಿತ ಸಂಖ್ಯೆಯ ಸಾರ್ವಜನಿಕರಿಗಷ್ಟೇ ಅವಕಾಶವಿದ್ದು, ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: