ಪ್ರಮುಖ ಸುದ್ದಿ

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ದೇಶ(ಶ್ರೀನಗರ)ಸೆ.28:- ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದ ಅವಂತಿಪುರದ ಸಂಬಾರ ಎಂಬಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ರಾಷ್ಟ್ರೀಯ ರೈಫಲ್ ಮತ್ತು ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಇಬ್ಬರು ಉಗ್ರರು ಮೃತಪಟ್ಟಿದ್ದು ಕಾರ್ಯಾಚರಣೆ ಮುಂದುವರೆದಿದೆ.

ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ನಂತರ ಸೇನೆ ಕಾರ್ಯಾಚರಣೆ ನಡೆಸಿತ್ತು. ಸದ್ಯ ಇಬ್ಬರು ಉಗ್ರರು ಹತರಾಗಿದ್ದು ಇನ್ನು ಹಲವರು ಅಡಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: