ಪ್ರಮುಖ ಸುದ್ದಿ

ಚಾಮರಾಜನಗರ : ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ರೈತಸಂಘದ ಕಾರ್ಯಕರ್ತರು

ರಾಜ್ಯ(ಚಾಮರಾಜನಗರ)ಸೆ.28:- ಎಪಿಎಂಸಿ, ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರ್ನಾಟಕ ಬಂದ್ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಚಾಮರಾಜನಗರ ಜಿಲ್ಲಾ ಕೇಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತಸಂಘದ ಕಾರ್ಯಕರ್ತರು ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ಟೈಯರ್ ಗೆ ಬೆಂಕಿ ಹಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುಳಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಗೆ ಮುಂದಾದ ರೈತರು ಟೈರ್ ಗೆ ಬೆಂಕಿಹಚ್ಚಲು ಮುಂದಾದ ಪೊಲೀಸರು ಬೆಂಕಿ ಹಚ್ಚದಂತೆ ಮಾಡಿದರೂ ಪೊಲೀಸರ ಮಾತಿಗೆ ಬಗ್ಗದ ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಕೆಲ ಸಮಯದ ನಂತರ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.
ಪ್ರತಿಭಟನೆಗೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು, ಬಿವಿಎಸ್ ಕಾರ್ಯಕರ್ತರು, ಎಸ್ ಡಿಪಿಐ ಕಾರ್ಯಕರ್ತರು ಬೆಂಬಲ ನೀಡಿದರು.
ಪ್ರತಿಭಟನಾ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು. ಬಂದ್ ವೇಳೆ ಎಂದಿನಂತೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿತ್ತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: