ಮೈಸೂರು

ಮಹಾಜನ ಕಾಲೇಜಿನ ವಿದ್ಯಾರ್ಥಿನಿಗೆ ದ್ವಿತೀಯ ರ್ಯಾಂಕ್

ಮೈಸೂರು,ಸೆ.29:- ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಪ್ರಮಿತ ವಿಜಯಕುಮಾರ್ ಅವರು ಮೈಸೂರು ವಿಶ್ವವಿದ್ಯಾನಿಲಯವು ನಡೆಸಿದ 2018-19ರ ಶೈಕ್ಷಣಿಕ ಸಾಲಿನ ಬಿ.ಎಸ್ಸಿ (ಬಿಟಿಬಿಎಂ) ಪದವಿ ಪರೀಕ್ಷೆಯಲ್ಲಿ 3747/4100 ಅಂಕಗಳೊಂದಿಗೆ ತೇರ್ಗಡೆ ಹೊಂದಿ ದ್ವಿತೀಯ ರ್ಯಾಂಕ್ ಗಳಿಸಿ ಎಚ್.ಎಸ್. ಪ್ರಭಾಕರ್ ನಗದು ಬಹುಮಾನವನ್ನು ಪಡೆದಿರುತ್ತಾರೆ.
ಮಹಾಜನ ವಿದ್ಯಾಸಂಸ್ಥೆಯ ಅಧ್ಯಕ್ಷರು, ಗೌರವ ಕಾರ್ಯದರ್ಶಿಗಳು ಹಾಗೂ ಆಡಳಿತ ಮಂಡಳಿಯ ಸದಸ್ಯರು, ಮಹಾಜನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರರು ಸಾಧನೆಗೈದ ವಿದ್ಯಾರ್ಥಿನಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: