ಕರ್ನಾಟಕಪ್ರಮುಖ ಸುದ್ದಿ

ಸದ್ಯಕ್ಕೆ ಶಾಲಾ-ಕಾಲೇಜು ಪ್ರಾರಂಭದ ಯೋಚನೆ ಸರ್ಕಾರದ ಮುಂದಿಲ್ಲ: ಸಚಿವ ಸುರೇಶ್ ಕುಮಾರ್

ಬೆಂಗಳೂರು,ಸೆ.29- ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ‘ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯೂ ಸರ್ಕಾರದ ಮುಂದೆ ಇಲ್ಲ. ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಅಂತೆಯೇ ನಾನೀಗ ಸದ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ ಎಂದಿದ್ದಾರೆ.

ಇದೇ ವೇಳೆ ಆರ್ ಟಿಇ ಹಣ ಬಿಡುಗಡೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದ ಹೇಳಿರುವ ಸುರೇಶ್ ಕುಮಾರ್ ಅವರು, ನನ್ನ ಕೋರಿಕೆಯನ್ನು ಮನ್ನಿಸಿ‌ ಕ್ಷಿಪ್ರವಾಗಿ ಆರ್.ಟಿ.ಇ ಹಣ ಬಿಡುಗಡೆ ಮಾಡಿರುವ ಮುಖ್ಯಮಂತ್ರಿಗಳಿಗೆ ವಂದನೆಗಳು. ಖಾಸಗಿ ಶಾಲಾ ಶಿಕ್ಷಕರ ಒಂದಷ್ಟು ಬವಣೆ ನೀಗುವಲ್ಲಿ‌ ಇದು ಖಂಡಿತ ಸಹಕಾರಿಯಾಗಲಿದೆ. ಶಾಲೆಗಳು ಈ ಹಣವನ್ನು ಶಿಕ್ಷಕರ‌ ವೇತನಕ್ಕೆ ಮೊದಲ ಆದ್ಯತೆಯಾಗಿ ಬಳಸಲು ಪ್ರಾಧಾನ್ಯತೆಯನ್ನು ನೀಡಬೇಕು ಎಂದು ಹೇಳಿದ್ದಾರೆ. (ಎಂ.ಎನ್)

Leave a Reply

comments

Related Articles

error: