ಪ್ರಮುಖ ಸುದ್ದಿಮೈಸೂರು

ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಅಧಿಕಾರ ಸ್ವೀಕರಿಸಿದ ನೂತನ ಡಿಸಿ ರೋಹಿಣಿ ಸಿಂಧೂರಿ


ಮೈಸೂರು,ಸೆ.29:- ಮೈಸೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡುತ್ತಿದ್ದಂತೆ ರೋಹಿಣಿ ಅವರು ಮೈಸೂರಿಗೆ ಆಗಮಿಸಿದ್ದಾರೆ.
ಇಂದೇ ಅಧಿಕಾರ ಸ್ವೀಕರಿಸಲು ಮುಂದಾಗಿರುವ ಅವರು ನೇರವಾಗಿ ನಾಡ ಅಧಿದೇವತೆ ಚಾಮುಂಡಿ ತಾಯಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಬೆಳ್ಳಂ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಟ್ಟಕ್ಕೆ ನೂತನ ಜಿಲ್ಲಾಧಿಕಾರಿ ಆಗಮಿಸುತ್ತಿದ್ದಂತೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಪ್ರಧಾನ ಅರ್ಚಕ ಡಾ. ಶಶಿಶೇಖರ ದೀಕ್ಷಿತ್ ಅವರು ರೋಹಿಣಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿದ್ದಾರೆ. ದೇವಸ್ಥಾನದ ಬಳಿ ಸುಮಾರು ಅರ್ಧ ತಾಸು ಇದ್ದ ರೋಹಿಣಿ ಅವರು ನಾಡಿನ ಜನತೆಗೆ ಒಳಿತು ಮಾಡು ಎಂದು ದೇವರನ್ನು ಪ್ರಾರ್ಥಿಸಿದ್ದಾರೆ. ಅಲ್ಲದೇ, ತಮ್ಮ ಕಾರ್ಯಗಳು ಸುಗಮವಾಗಿ ಸಾಗಲಿ ಎಂದು ದೇವರ ಬಳಿ ಮೊರೆ ಹೋಗಿದ್ದಾರೆ. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್ ಅವರಿಗೆ ಸ್ಥಳ ತೋರಿಸದೇ ವರ್ಗಾಯಿಸಿರುವ ಸರ್ಕಾರ ಅವರ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿದೆ. ತಕ್ಷಣಕ್ಕೆ ಜಾರಿ ಬರುವಂತೆ ಸೋಮವಾರದಿಂದಲೇ ಅಧಿಕಾರ ಕೈಗೆತ್ತಿಕೊಳ್ಳುವಂತೆ ಸರ್ಕಾರ ಆದೇಶಿಸಿತ್ತು. ಅದರಂತೆ ಅವರು ಮೈಸೂರಿಗೆ ಆಗಮಿಸಿದ್ದರು. ರೋಹಿಣಿ ಸಿಂಧೂರಿ ಈ ಹಿಂದೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ, ಹಾಸನ ಜಿಲ್ಲಾಧಿಕಾರಿಯಾಗಿ, ಮುಜರಾಯಿ ಇಲಾಖೆಯ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದರು.

ಅಧಿಕಾರ ಸ್ವೀಕರಿಸಿದ ನೂತನ ಡಿಸಿ ರೋಹಿಣಿ ಸಿಂಧೂರಿ
ಇಂದು ಜಿಲ್ಲಾಧಿಕಾರಿ ಗಳ ಕಛೇರಿಯಲ್ಲಿ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕರಿಸಿದರು. ಅಪರಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: